ಇಂದು ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಫಲಿತಾಂಶ – ಮಧ್ಯಾಹ್ನ 3 ಗಂಟೆಗೆ ರಿಸಲ್ಟ್​​ ಪ್ರಕಟ

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ನಡೆದಿದ್ದು, ಅದರ ಫಲಿತಾಂಶ ಇಂದು ಮಾಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ರಾಜ್ಯದ ದ್ವಿತೀಯ ಪಿಯುಸಿ (Second PUC Result) ವಿದ್ಯಾರ್ಥಿಗಳು ಕಾತುರಿಂದ ಕಾಯುತ್ತಿದ್ದ ದಿನ ಕೊನೆಗೂ ಸಮೀಪಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸುತ್ತಿದೆ. ಮಂಡಳಿತ ಅಧಿಕೃತ ವೆಬ್​ಸೈಟ್​ ಅಥವಾ ಕರ್ನಾಟಕ ವನ್​ ಮೊಬೈಲ್​ ಆ್ಯಪ್​ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ. ವಿದ್ಯಾರ್ಥಿಗಳ ಅಧಿಕೃತ ಮೊಬೈಲ್​ ಸಂಖ್ಯೆಗೆ ವಾಟ್ಸಾಪ್​ ಮೂಲಕ ಅಥವಾ ಎಸ್​ಎಂಎಸ್​ ಮೂಲಕ ಫಲಿತಾಂಶ ಬಂದು ತಲುಪಲಿದೆ.

ಈ ಬಾರಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಅಂಕಪಟ್ಟಿಗಾಗಿ ಕಾಯುವ ಅವಶ್ಯಕತೆಯೇ ಇಲ್ಲ. ರಿಸಲ್ಟ್​ ಘೋಷಣೆಯಾಗುತ್ತಿದ್ದಂತೆಯೇ ಡಿಜಿಲಾಕರ್​ನಲ್ಲಿ ನಿಮ್ಮ ಅಂಕಪಟ್ಟಿ ಲಭ್ಯವಾಗಲಿದೆ. ಹೀಗಾಗಿ ವಿದ್ಯಾರ್ಥಿಗಳು ಡಿಜಿಲಾಕರ್​ ಅಪ್ಲಿಕೇಶನ್​ ಬಳಸಿ ತಮ್ಮ ಅಂಕಪಟ್ಟಿಗಳನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ.

ಡಿಜಿಲಾಕರ್​ನಲ್ಲಿ ಅಂಕಪಟ್ಟಿ ಡೌನ್​ಲೋಡ್​ ಮಾಡಿಕೊಳ್ಳುವುದು ಇದೇ ಮೊದಲ ಬಾರಿಗೆ ಪರಿಚಯಿಸಿದ ಸೌಲಭ್ಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಇಂದು ಮಧ್ಯಾಹ್ನ 3 ಗಂಟೆ ಬಳಿಕ https://www.digilocker.gov.in ಗೆ ಲಾಗಿನ್​ ಆಗಿ ತಮ್ಮ ಅಂಕಪಟ್ಟಿಗಳನ್ನು ಪಡೆದುಕೊಳ್ಳಬಹುದಾಗಿದೆ.
ಇಂದು ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: PUC Result 2026 : ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವ ಮುನ್ನ ಈ 3 ವಿಷಯ ತಿಳಿದಿರಲಿ; ಲಿಂಕ್ ಇಲ್ಲಿದೆ

ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯಾದ್ಯಂತ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರಗೊಳ್ಳಲಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories