ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ…! 99% ವಿದ್ಯಾರ್ಥಿಗಳು ಪಾಸ್…!!

ರಾಜ್ಯದಲ್ಲಿ ಇತ್ತೀಚಿಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಓರ್ವ ವಿದ್ಯಾರ್ಥಿನಿ ಹೊರತು ಪಡಿಸಿ ಪರೀಕ್ಷೆಗೆ ಹಾಜರಾಗಿದ್ದ 8 ಲಕ್ಷದ 71 ಸಾವಿರದ  443 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥೀಗಳ ಪೈಕಿ, 157 ವಿದ್ಯಾರ್ಥಿಗಳು 125 ಕ್ಕೆ 125 ಅಂಕ ಪಡೆದಿದ್ದಾರೆ. 25 ಸಾವಿರದ 702 ವಿದ್ಯಾರ್ಥಿಗಳು ಪ್ರಥಮ ಭಾಷೆಯಲ್ಲಿ 100 ಕ್ಕೆ 100 ಅಂಕ ಗಳಿಸಿದ್ದಾರೆ.

ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದರೇ, ದ್ವಿತೀಯ ಭಾಷೆಯಲ್ಲಿ 36,628 ವಿದ್ಯಾರ್ಥಿಗಳು, 36,776 ವಿದ್ಯಾರ್ಥಿಗಳು ತೃತೀಯ ಭಾಷೆಯಲ್ಲಿ 100 ಕ್ಕೆ 100 ಅಂಕ ಪಡೆದಿದ್ದಾರೆ.

ಗಣಿತದಲ್ಲಿ 6,321,ವಿಜ್ಞಾನದಲ್ಲಿ 3,649 , ಸಮಾಜ ವಿಜ್ಞಾನದಲ್ಲಿ 9,637 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದು ತೇರ್ಗಡೆಯಾಗಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 1,28,391 ವಿದ್ಯಾರ್ಥಿಗಳು ಎ+ ಗ್ರೇಡ್ ಪಡೆದಿದ್ದು, ಎ ಶ್ರೇಣಿಯಲ್ಲಿ 2,50,317 ಗಳು ಪಾಸಾಗಿದ್ದಾರೆ.

2,87,684 ವಿದ್ಯಾರ್ಥಿಗಳು ಬಿ ಶ್ರೇಣಿಯಲ್ಲಿ 1,13,160 ವಿದ್ಯಾರ್ಥಿಗಳು ಸಿ ಗ್ರೇಡ್ ನಲ್ಲಿ ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದರೂ ಸರ್ಕಾರಿ ವೆಬ್ ಸೈಟ್ ನಲ್ಲಿ ರಿಸಲ್ಟ್ ಸಿಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು  ಫಲಿತಾಂಶ ನೋಡಲು ಪರದಾಡುವಂತಾಗಿದೆ.

Comments are closed.