SSLC Result 2021 : ಆಗಸ್ಟ್‌ 10ರ ಒಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎರಡು ದಿನಗಳ ಕಾಲ ಯಶಸ್ವಿಯಾಗಿ ಮುಗಿದಿದ್ದು, ಅಗಸ್ಟ್‌ 10ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ಪರೀಕ್ಷೆಯ ಯಶಸ್ಸಿಗೆ ಕಾರಣರಾದವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಅವರು, ಈ ಬಾರಿ ಎರಡು ದಿನಗಳ ಕಾಲ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪರೀಕ್ಷೆ ಹಾಜರಾಗದ ವಿದ್ಯಾರ್ಥಿಗಳಿಗೆ ಅಗಸ್ಟ್‌ ತಿಂಗಳಿನಲ್ಲಿ ಮತ್ತೆ ಪರೀಕ್ಷೆ ನಡೆಸಲಾಗುತ್ತದೆ. ಈ ಬಾರಿಯ ಪರೀಕ್ಷೆಗೆ ಯಾವುದೇ ಸಮಸ್ಯೆ ಎದುರಾಗಿಲ್ಲ. ಈ ಬಾರಿ ಶೇ.99.69 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಅಲೆಯ ನಡುವಲ್ಲೇ ಎರಡು ವರ್ಷವೂ ಪರೀಕ್ಷೆ ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಶಾಲಾರಂಭಕ್ಕೆ ಸಂಬಂಧಿಸಿದಂತೆ ಕೋವಿಡ್‌ ತಾಂತ್ರಿಕ ಸಮಿತಿ ವರದಿಯನ್ನು ಸಿದ್ದಪಡಿಸುತ್ತಿದ್ದು, ವರದಿ ಬಂದ ನಂತರದಲ್ಲಿ ಶಾಲಾರಂಭದ ಕುರಿತು ತೀರ್ಮಾನಕೈಗೊಳ್ಳಲಾಗುವುದು ಎಂದಿದ್ದಾರೆ.

Comments are closed.