ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಶಾಲೆ-ಕಾಲೇಜು ಆರಂಭ : ಸಿದ್ದವಾಯ್ತು ಮಾರ್ಗಸೂಚಿ !

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಸಪ್ಟೆಂಬರ್ 21 ರಿಂದ ಶಾಲೆ – ಕಾಲೇಜುಗಳು ಭಾಗಶಃ ಆರಂಭವಾಗಲಿದೆ. ಆರಂಭದಲ್ಲಿ 9 ರಿಂದ 12ನೇ ತರಗತಿ ವರೆಗಿನ ಮಕ್ಕಳು ಶಾಲೆಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗುತ್ತಿದ್ದು, ರಾಜ್ಯ ಸರಕಾರ ಸ್ಕೂಲ್ ಗೈಡ್ ಲೈನ್ಸ್ ಸಿದ್ದಪಡಿಸಿದೆ.

ಕೇಂದ್ರ ಸರಕಾರ ದೇಶದಾದ್ಯಂತ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಹೊರಡಿಸಿದ್ದು, ಸಪ್ಟೆಂಬರ್ 21ರಿಂದ ಶಾಲೆಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಮತಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಿಕ್ಷಣ ಇಲಾಖೆ ಶಾಲೆ – ಕಾಲೇಜುಗಳನ್ನು ತೆರೆಯಲು ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಆರೋಗ್ಯ ಇಲಾಖೆ ಎರಡರಿಂದ ಮೂರು ದಿನಗಳ ಒಳಗಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.

ಆರಂಭಿಕ ಹಂತದಲ್ಲಿ 9ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರವೇ ಶಾಲೆಗೆ ತೆರಳಲು ಅವಕಾಶವನ್ನು ಕಲ್ಪಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆಯನ್ನು ನಡೆಸಿದೆ.

  • ಶಾಲೆ ಆರಂಭಕ್ಕೆ ಸರಕಾರದ ಮಾರ್ಗಸೂಚಿಯಲ್ಲೇನಿದೆ ?
  • ಯಾವುದೇ ಕಾರಣಕ್ಕೂ ಮಕ್ಕಳನ್ನು ಶಾಲೆಗೆ ಬರುವಂತೆ ಶಿಕ್ಷಕರು ಒತ್ತಾಯವನ್ನು ಮಾಡುವಂತಿಲ್ಲ.
  • ಒಂದೊಮ್ಮೆ ವಿದ್ಯಾರ್ಥಿಗಳು ಶಾಲೆಗೆ ಬರುವುದಾದ್ರೆ ಪ್ರತೀ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರವನ್ನು ತರಲೇ ಬೇಕು.
  • ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ನಡೆಸಲೇ ಬೇಕು.
  • ಮಕ್ಕಳು ಹಾಗೂ ಸಿಬ್ಬಂದಿಗಳು ಮಾಸ್ಕ್ ಮತ್ತು ಸ್ಯಾನಿಟೈಸ್ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.
  • ಶಾಲೆಯಲ್ಲಿ ಪ್ರತೀ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಪಾಡುವಂತೆ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾಡಬೇಕು.
  • ಶಾಲೆಯ ಪ್ರತೀ ಕೊಠಡಿಯನ್ನು ನಿತ್ಯವೂ ಸ್ಯಾನಿಟೈಸ್ ಮಾಡಲೇಬೇಕು.
  • ಮಕ್ಕಳು ಶಾಲಾ-ಆವರಣದಲ್ಲಿ ಗುಂಪು ಕಟ್ಟದಂತೆ ಎಚ್ಚರವಹಿಸಬೇಕು.
  • ಶೌಚಾಲಯ ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಇರಬೇಕು.
  • ಆಟ, ಊಟ, ಪ್ರಾರ್ಥನೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವ್ಯವಸ್ಥೆ ಮಾಡಬೇಕು.
  • ಲೈಬ್ರರಿಯಲ್ಲಿ ಹೆಚ್ಚು ಮಕ್ಕಳು ಸೇರದಂತೆ ಕ್ರಮವಹಿಸಬೇಕು ಅಲ್ಲದೇ ವಿದ್ಯಾರ್ಥಿಗಳು ಗುಂಪು ಕ್ರೀಡೆಯಲ್ಲಿ ಪಾಲ್ಗೊಳ್ಳು ಅವಕಾಶವನ್ನು ನೀಡಬಾರದು.
Leave A Reply

Your email address will not be published.