ಪರೀಕ್ಷೆ ಮುಗಿಯುತ್ತಿದ್ದಂತೆಯೇ ಶಾಲೆಗಳಿಗೆ ಬೇಸಿಗೆ ರಜೆ : ಬಿಸಿಲ ತಾಪಮಾನ ಹೆಚ್ಚಿದ ಬೆನ್ನಲ್ಲೇ ಇಲಾಖೆಗೆ ಶಿಕ್ಷಕರ ಮನವಿ

ಬೆಂಗಳೂರು : ಒಂದೆಡೆ ಕೊರೊನಾ ವೈರಸ್ ಸೋಂಕಿನ ಆರ್ಭಟ, ಇನ್ನೊಂದೆಡೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಎಪ್ರೀಲ್ ತಿಂಗಳಲ್ಲಿ ಪರೀಕ್ಷೆ ಮುಗಿಸಿ ಬೇಸಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಕರು ಇದೀಗ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಅವರಿಗೆ ಮನವಿ ಮಾಡಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ಬಾರಿ ಶೈಕ್ಷಣಿಕ ಚಟುವಟಿಕೆಯಲ್ಲಿ ವ್ಯತ್ಯಯವಾಗಿದೆ. ಈ ಹಿನ್ನೆಲೆಯಲ್ಲಿ ಎಪ್ರಿಲ್ , ಮೇ ತಿಂಗಳಲ್ಲಿಯೂ ಶೈಕ್ಷಣಿಕ ಚಟುವಟಿಕೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಅದ್ರಲ್ಲೂ ಮೇ ಅಂತ್ಯದಲ್ಲಿ ಪರೀಕ್ಷೆ ನಡೆಸುವುದಾಗಿಯೂ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಹಿಂದೆಯೇ ಹೇಳಿದ್ದಾರೆ.

ಆದ್ರೆ ಇಷ್ಟು ವರ್ಷ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗಳನ್ನು ಮುಗಿಸಿ ಎಪ್ರಿಲ್ 11ರ ನಂತರ ಶಾಲೆಗಳಿಗೆ ಬೇಸಿಗೆ ರಜೆ ಘೋಷಿಸಲಾಗುತ್ತಿತ್ತು. ಆದರೆ ಬಾರಿ ಎಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಎಪ್ರಿಲ್ ತಿಂಗಳಿನಲ್ಲಿ ಶಾಲಾವಧಿಯನ್ನು ಬದಲಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿದೆ.

https://kannada.newsnext.live/mangalore-operation-doctor-asult/

ಅಷ್ಟೇ ಅಲ್ಲಾ ಪರೀಕ್ಷೆಗೆ ಈ ಬಾರಿ ಎಪ್ರಿಲ್ ತಿಂಗಳಲ್ಲಿ ನಡೆಸುವ ನಿರ್ಧಾರವನ್ನು ಸರಕಾರ ಕೈಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಮಾನ ಕೂಡ ಅತ್ಯಂತ ಹೆಚ್ಚಾಗಿ ಇರುವುದರಿಂದ ಪರೀಕ್ಷೆ ಮುಗಿದ ತಕ್ಷಣ ಮಕ್ಕಳಿಗೆ ಬೇಸಿಗೆ ರಜೆಯನ್ನು ಘೋಷಣೆ ಮಾಡಬೇಕೆಂಬ ಬೇಡಿಕೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳ ಮುಂದೆ ಇಟ್ಟಿದ್ದಾರೆ.

ಇನ್ನು ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚುತ್ತಿದ್ರೆ, ಇನ್ನೊಂದೆಡೆ ಕೊರೊನಾ ವೈರಸ್ ಸೋಂಕಿನ ಸಂಖ್ಯೆಯೂ ಹೆಚ್ಚುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ದಿನವೀಡಿ ಮಾಸ್ಕ್ ಧರಿಸಿ ತರಗತಿಗಳಿಗೆ ಹಾಜರಾಗುವುದು ಕಷ್ಟಕರವಾಗುತ್ತಿದೆ. ಇದೀಗ ಶಿಕ್ಷಕರೇ ಖುದ್ದು ಬೇಸಿಗೆ ರಜೆಗೆ ಮನವಿ ಮಾಡಿರೋ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅದ್ಯಾವ ಕ್ರಮಕೈಗೊಳ್ಳಲಿದೆ ಅನ್ನೋದನ್ನು ಕಾದುನೋಡಬೇಕಿದೆ.

https://kannada.newsnext.live/increasing-heat-on-the-other-hand-corona-panic-teachers-students-from-mask/

Comments are closed.