KCET ಫಲಿತಾಂಶ 2022 ನಾಳೆ ಪ್ರಕಟ : ಫಲಿತಾಂಶಕ್ಕಾಗಿ kea.kar.nic.in ಕ್ಲಿಕ್‌ ಮಾಡಿ

ಬೆಂಗಳೂರು : ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ 2022 (KCET Result 2022) ನಾಳೆ ಜುಲೈ 30, 2022 ರಂದು ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೆಇಎ ಸಿದ್ದತೆ ಮಾಡಿಕೊಂಡಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಫಲಿತಾಂಶ ಪ್ರಕಟವಾದ ನಂತರದಲ್ಲಿ ವಿದ್ಯಾರ್ಥಿ ಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ kea.kar.nic.in ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಸಿಇಟಿ ಫಲಿತಾಂಶ ಪ್ರಕಟಿಸುವ ಕುರಿತು ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ಅವರು ಮಾಹಿತಿ ನೀಡಿದ್ದರು. ಫಲಿತಾಂಶ ಪ್ರಕಟವಾದ ನಂತರದಲ್ಲಿ ವಿದ್ಯಾರ್ಥಿಗಳು ವೆಬ್‌ಸೈಟ್‌ ಮೂಲಕ ಫಲಿತಾಂಶದ ಜೊತೆಗೆ ಇತರ ಮಾಹಿತಿಯನ್ನು ಪರಿಶೀಲಿಸಬಹುದಾಗಿದೆ. ಅಲ್ಲದೇ ಅಂಕ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಿಕೊಳ್ಳ ಬಹುದಾಗಿದೆ.

ಪರೀಕ್ಷಾ ಅಕ್ರಮಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಈ ಬಾರಿ ಸಿಇಟಿ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ಹಾಗೂ ಭದ್ರತೆಗಳ ಸಮೇತ ನಡೆಸಲಾಗಿತ್ತು. ಈ ಬಾರಿ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯ ಕ್ರಮದ ವಿದ್ಯಾರ್ಥಿಗಳಿಗೂ ಜೂನ್​ ಮಧ್ಯಭಾಗದಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಜುಲೈ 26ರರ(ಮಂಗಳವಾರ) ಒಳಗಾಗಿ ತಮ್ಮ ಅಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ನಮೂದಿಸಬೇಕು ಎಂದು ಸೂಚನೆ ನೀಡಲಾಗಿದೆ. ಜೂನ್​ 16,17 ಹಾಗೂ 18ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆಗಳನ್ನು ನಡೆಸಲಾಗಿತ್ತು.ಜುಲೈ 30ರಂದು ಪ್ರಕಟವಾಗುವ ಫಲಿತಾಂಶವನ್ನು ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್​ಸೈಟ್​ kea.kar.nic.in ನಲ್ಲಿ ವೀಕ್ಷಿಸಬಹುದಾಗಿದೆ . ಇಂಜಿನಿಯರಿಂಗ್​ ಸೇರಿದಂತೆ ವಿವಿಧ ವೃತ್ತಿ ಪರ ಕೋರ್ಸ್‌ಗಳಿಗೆ ಸಿಇಟಿ ಅಂಕ ಮುಖ್ಯವಾಗಿದೆ.

ಸಿಇಟಿ ಫಲಿತಾಂಶಗಳನ್ನು ಪರಿಶೀಲಿಸಲು ಹಂತ 2022:

  • KEA KCET ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – kea.kar.nic.in 2022
  • ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನೋಂದಣಿ ಸಂಖ್ಯೆಯನ್ನು ನಮೂದಿಸಿ.
  • “ಸಲ್ಲಿಸು” ಕ್ಲಿಕ್ ಮಾಡಿ.
  • ಕರ್ನಾಟಕ ಫಲಿತಾಂಶ KCET ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
  • KCET ಪರೀಕ್ಷೆಯ ಫಲಿತಾಂಶ 2022 ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಇದನ್ನೂ ಓದಿ : 1ನೇ ತರಗತಿ ದಾಖಲಾತಿಗೆ ವಯೋಮಿತಿ ಹೆಚ್ಚಳ : ರಾಜ್ಯ ಸರಕಾರದ ಆದೇಶದಲ್ಲೇನಿದೆ ?

ಇದನ್ನೂ ಓದಿ : NEET Answer Key: ನೀಟ್ ಉತ್ತರದ ಕೀಲಿ ಇಂದು ಬಿಡುಗಡೆ ಸಾಧ್ಯತೆ; ಪರಿಶೀಲಿಸುವುದು ಹೇಗೆ ಎಂಬುದು ಇಲ್ಲಿದೆ

KCET Result 2022 will announce tomorrow: download results kea.kar.nic.in

Comments are closed.