KCET Result 2023 : ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟ : ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು : KCET Result 2023 : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಕೆಸಿಇಟಿ ಫಲಿತಾಂಶಗಳನ್ನು ಬಿಡುಗಡೆ ಮಾಡಲಿದೆ. ಕರ್ನಾಟಕ ಯುಜಿ ಸಿಇಟಿ (UG CET ) ಇಂದು ಜೂನ್ 15 ರಂದು ಬೆಳಿಗ್ಗೆ 11 ಕ್ಕೆ ಪ್ರಕಟವಾಗಲಿದೆ. karnataka.gov.in ನಲ್ಲಿಯೂ KCET ಫಲಿತಾಂಶಗಳು 2023 ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಬಹುದಾಗಿದೆ. ಅಲ್ಲದೇ ವಿದ್ಯಾರ್ಥಿಗಳು ಕರ್ನಾಟಕದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು kea.kar.nic.in ಅಥವಾ cetonline ನಲ್ಲಿಯೂ ಪರಿಶೀಲಿಸಬಹುದಾಗಿದೆ.

KCET ಫಲಿತಾಂಶ 2023 ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದಾರೆ. ವೃತ್ತಿಪರ ಕೋರ್ಸ್‌ಗಳಾದ ಆರ್ಕಿಟೆಕ್ಚರ್‌, ಇಂಜಿನಿಯರಿಂಗ್‌, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ಸಿ ನರ್ಸಿಂಗ್‌ ಸೇರಿದಂತೆ ಹಲವು ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಫಲಿತಾಂಶವು ಪ್ರಾಮುಖ್ಯವಾಗಿದೆ. ಮೇ 20 ಮತ್ತು 21 ರಂದು ರಾಜ್ಯದ 592 ಪರೀಕ್ಷೇ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯನ್ನು ನಡೆಸಲಾಗಿತ್ತು. ಸುಮಾರು 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಫಲಿತಾಂಶವು ಇಂದು ಬೆಳಗ್ಗೆ 11 ಗಂಟೆಗೆ ಲಭ್ಯವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.

KCET Result 2023 : ಈ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಲಭ್ಯ :

www.kea.kar.nic.in ಮತ್ತು www.cetonline.karnataka.gov.in ಮತ್ತು www.karresults.nic.in ನಿಂದ ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಬಹುದು. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಸುಲಭವಾಗಿ ಪ್ರವೇಶಿಸಲು ತಮ್ಮ ನೋಂದಣಿ ಸಂಖ್ಯೆಯನ್ನು ಕೈಯಲ್ಲಿ ಇಟ್ಟುಕೊಳ್ಳುವುದು ಸೂಕ್ತವಾಗಿದೆ.

KCET Result 2023 : ಸಿಇಟಿ ಪರಿಶೀಲಿಸಲು ಕ್ರಮಗಳು:

  • ಹಂತ 1: www.kea.kar.nic.in ನಲ್ಲಿ KEA ಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ.
  • ಹಂತ 2: ಮುಖಪುಟದಲ್ಲಿ ಯುಜಿಸಿಇಟಿ -2023 ಫಲಿತಾಂಶದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ
  • ಹಂತ 4: ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ (DOB) ನಮೂದಿಸಿ.
  • ಹಂತ 5: ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ.
  • ಹಂತ 6: ಪರಿಷ್ಕೃತ ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ವಿವರಗಳನ್ನು ಪರಿಶೀಲಿಸಿ.
  • ಹಂತ 7: ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರತಿಯನ್ನು ಮುದ್ರಿಸಿ.

KCET Result 2023 Today announce KEA Karnataka

Comments are closed.