sslc result 2022 announced : ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಮೇಲುಗೈ ಸಾಧಿಸಿದ ಬಾಲಕಿಯರು

sslc result 2022 announced : 2021-22ನೇ ಸಾಲಿನ ಎಸ್​ಎಸ್​​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಂದು ಹೊರಬಿದ್ದಿದೆ. ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,53,436 ವಿದ್ಯಾರ್ಥಿಗಳಲ್ಲಿ 81.03 ಪ್ರತಿಶತದಷ್ಟು ಬಾಲಕರು ಹಾಗೂ 90.29 ಪ್ರತಿಶತದಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು ಈ ಶೈಕ್ಷಣಿಕ ವರ್ಷದಲ್ಲಿಯೂ ಸಹ ಬಾಲಕಿಯರೇ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲುಗೈ ಸಾಧಿಸಿದಂತಾಗಿದೆ.


ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್​, ಪರೀಕ್ಷೆ ಬರೆದ 8,53,436 ವಿದ್ಯಾರ್ಥಿಗಳ ಪೈಕಿ 730,881 ಮಕ್ಕಳು ಪಾಸ್​ ಆಗಿದ್ದು, ಶೇ. 85.63 ಮಂದಿ ಈ ಬಾರಿ ಪರೀಕ್ಷೆಯಲ್ಲಿ ಉತ್ತೀರ್ಣರಾದಂತಾಗಿದೆ. 145 ಮಕ್ಕಳು 625ಕ್ಕೆ 625 ಅಂಕ ಪಡೆದಿದ್ದರೆ 309 ಮಕ್ಕಳು 624 ಅಂಕ ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.


ಈ ವರ್ಷ ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕ ನೀಡಿದ್ದು ಹಾಗೂ ವಿದ್ಯಾರ್ಥಿ ಸ್ನೇಹಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಿದ್ದು ಇಷ್ಟೊಂದು ದಾಖಲೆ ಮಟ್ಟದಲ್ಲಿ ಫಲಿತಾಂಶ ಬರಲು ಕಾರಣವಾಗಿದೆ. ಪ್ರಶ್ನೆ ಪತ್ರಿಕೆಯಲ್ಲಿ 10 ಪ್ರತಿಶತ ಮಾತ್ರ ಕಷ್ಟದ ಪ್ರಶ್ನೆಗಳನ್ನು ಇಡಲಾಗಿತ್ತು. 35,931 ವಿದ್ಯಾರ್ಥಿಗಳಿಗೆ 1 ವಿಷಯದಲ್ಲಿ ಗ್ರೇಸ್​ ಅಂಕ ನೀಡಲಾಗಿದೆ. 3,940 ವಿದ್ಯಾರ್ಥಿಗಳು ಎರಡು ವಿಷಯಗಳಲ್ಲಿ ಗ್ರೇಸ್​ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿ : Andrew Symonds Dies : ಆಸ್ಟ್ರೇಲಿಯಾದ ಕ್ರಿಕೆಟ್‌ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನ

ಇದನ್ನೂ ಓದಿ : Navjot Singh Sidhu : ನವಜೋತ್ ಸಿಂಗ್ ಸಿಧುಗೆ ಒಂದು ವರ್ಷ ಜೈಲು

kseeb karnataka sslc result 2022 announced

Comments are closed.