ಈ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ!

2nd PUC Students Exams | KSRTC BMTC Free Bus: ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮಹತ್ವದ ಸಿಹಿಸುದ್ದಿ ನೀಡಿದೆ. ಫೆಬ್ರವರಿ 28 ರಿಂದ ಪ್ರಾರಂಭವಾಗಲಿರುವ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ, ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಸಾಮಾನ್ಯವಾಗಿ ವಿದ್ಯಾರ್ಥಿಗಳಿಗೆ ತಮ್ಮದೇ ಕಾಲೇಜುಗಳ ಬದಲು ಬೇರೆ ಕಾಲೇಜುಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗುತ್ತದೆ. ಇದರಿಂದ ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಎದುರಾಗಬಾರದು ಮತ್ತು ಆರ್ಥಿಕ ಹೊರೆ ತಗ್ಗಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಮತ್ತು ಸಾರಿಗೆ ಇಲಾಖೆ ಈ ನಿರ್ಧಾರ ಕೈಗೊಂಡಿದೆ.

ಜಿಲ್ಲಾ ವೈದ್ಯಾಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ : ಶಾಸಕ ವಿ.ಸುನೀಲ್​ ಕುಮಾರ್​ ಗರಂ

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಸಕಾಲಕ್ಕೆ ಪರೀಕ್ಷಾ ಕೇಂದ್ರ ತಲುಪಲು ಈ ವ್ಯವಸ್ಥೆ ಮಾಡಲಾಗಿದೆ. ಪ್ರವೇಶ ಪತ್ರ ತೋರಿಸಿ ಪರೀಕ್ಷೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಉಚಿತವಾಗಿ ಪ್ರಯಾಣಿಸಬಹುದು. ಎಂದು ಸಾರಿಗೆ ನಿಗಮದ ಅಧಿಕೃತ ಪ್ರಕಟಣೆ ತಿಳಿಸಿದೆ. ಈ ನಿರ್ಧಾರದಿಂದ ರಾಜ್ಯದ ಸುಮಾರು 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

Exit mobile version