Learning Achievement Survey: ಸರಕಾರಿ ಪ್ರೌಢ, ಪ್ರಾಥಮಿಕ ಶಾಲೆಗಳಲ್ಲಿ ಕಲಿಕಾ ಸಾಧನಾ ಸಮೀಕ್ಷೆ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: (Learning Achievement Survey) ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಿಸುವ ಹಿನ್ನಲೆಯಲ್ಲಿ ಕಲಿಕಾ ಸಾಧನಾ ಸಮೀಕ್ಷೆಯನ್ನು ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಜನವರಿ 17 ಮತ್ತು 18 ರಂದು ಕಲಿಕಾ ಸಾಧನಾ ಸಮೀಕ್ಷೆ ನಡೆಸಲು ಇಲಾಖೆ ಮುಂದಾಗಿದ್ದು 3, 5, 8, 9, ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಈ ಸಮೀಕ್ಷೆಯನ್ನು ನಡೆಸಲಾಗುತ್ತದೆ.

ಕಲಿಕಾ ಸಾಧನಾ ಸಮೀಕ್ಷೆ(Learning Achievement Survey)ಗೆ ರಾಜ್ಯದ ಒಟ್ಟು 3038 ಶಾಲೆಗಳಿಂದ 3, 5, 8, 9, ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ 2,11,520 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮೂರು ಮತ್ತು ಐದನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಹಾಗೂ ಎಂಟು, ಒಂಬತ್ತು ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲಿಷ್‌ ಎರಡೂ ಮಾಧ್ಯಮದಲ್ಲೂ ಸಮೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಮೂರನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಗಣಿತ ವಿಷಯದಲ್ಲಿ, ಐದನೇ ತರಗತಿ ಮಕ್ಕಳಿಗೆ ಕನ್ನಡ, ಇಂಗ್ಲಿಷ್‌, ಗಣಿತ ಮತ್ತು ಪರಿಸರ ಅಧ್ಯಯನ ವಿಷಯದಲ್ಲಿ ಹಾಗೂ ಎಂಟು, ಒಂಬತ್ತು ಮತ್ತು ಹತ್ತನೇ ತರಗತಿಗೆ ಕನ್ನಡ, ಇಂಗ್ಲಿಷ್‌, ಹಿಂದಿ, ಗಣಿತ, ವಿಜ್ಞಾನ, ಮತ್ತು ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಕಲಿಕಾ ಸಾಧನಾ ಸಮೀಕ್ಷೆ ನಡೆಸಲಾಗುವುದು ಹಾಗೂ ಬಹು ಆಯ್ಕೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ಸಮೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.

ಇದನ್ನೂ ಓದಿ : Government high school vaddarse : ರಜತ ಮಹೋತ್ಸವ ಸಂಭ್ರಮದಲ್ಲಿ ವಡ್ಡರ್ಸೆ ಸರಕಾರಿ ಪ್ರೌಢಶಾಲೆ

ಇದನ್ನೂ ಓದಿ : Covid School holiday :ಕೋವಿಡ್ ಪ್ರಕರಣ ಹೆಚ್ಚಳ : ಕರ್ನಾಟಕದ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ಇದನ್ನೂ ಓದಿ : Lohith emba marimudda: ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ : ಬಿಕಾಂ ಪಠ್ಯಪುಸ್ತಕದಲ್ಲಿ ಪುನೀತ್ ರಾಜ್ ಕುಮಾರ್ ಅಧ್ಯಾಯ

On January 17th and 18th, the department has decided to conduct a learning survey for students studying in classes 3, 5, 8, 9, and 10.

Comments are closed.