Lohith emba marimudda: ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ : ಬಿಕಾಂ ಪಠ್ಯಪುಸ್ತಕದಲ್ಲಿ ಪುನೀತ್ ರಾಜ್ ಕುಮಾರ್ ಅಧ್ಯಾಯ

ಬೆಂಗಳೂರು: (Lohith emba marimudda) ಪದವಿ ಶಿಕ್ಷಣ ಇಲಾಖೆ ಪುನಿತ್‌ ರಾಜ್‌ ಕುಮಾರ್‌ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದು, ಇದೀಗ ಕರ್ನಾಟಕದ ರತ್ನ ಪುನೀತ್ ರಾಜ್‌ಕುಮಾರ್ ಕುರಿತ ಪಾಠ ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯ ಪುಸ್ತಕದಲ್ಲಿ ಸೇರ್ಪಡೆಯಾಗಿದೆ. ಬಿಕಾಂ ಪದವಿ ಮೂರನೇ ಸೆಮಿಸ್ಟರ್‌ನ ಕನ್ನಡ ಭಾಷಾ ಪಠ್ಯದಲ್ಲಿ ಪುನೀತ್‌ ಅವರ ಜೀವನದ ಆಯ್ದಭಾಗವನ್ನು ಪಠ್ಯ ಭಾಗದಲ್ಲಿ ಅಳವಡಿಸಲಾಗಿದೆ.

ಕೆಲವು ದಿನಗಳ ಹಿಂದೆ ಪುನೀತ್‌ ರಾಜ್‌ ಕುಮಾರ್‌ ಜೀವನದ ಕಥಾಭಾಗ(Lohith emba marimudda)ವನ್ನು ಕನ್ನಡ ಪಠ್ಯಪುಸ್ತಕದಲ್ಲಿ ಅಳವಡಿಸಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿಗಳು ಸರಕಾರಕ್ಕೆ ಪತ್ರ ಬರೆದಿದ್ದರು. ಅಲ್ಲದೆ ಶಿಕ್ಷಣ ಮಂತ್ರಿಗಳಲ್ಲೂ ಮನವಿ ಸಲ್ಲಿಸಿದ್ದರು. ಇದೀಗ ಪುನಿತ್‌ ರಾಜ್‌ ಕುಮಾರ್‌ ಅವರ ಕೋರಿಕೆಗೆ ಬೆಂಗಳೂರು ವಿವಿ ಅಸ್ತು ಎಂದಿದ್ದು, ಮೂರನೇ ಸೆಮಿಸ್ಟರ್‌ ನ ಬಿಕಾಂ ಪಠ್ಯಪುಸ್ತಕದಲ್ಲಿ ಅಪ್ಪು ಅವರ ಜೀವನದ ಅಧ್ಯಾಯವನ್ನು ಅಳವಡಿಸಲಾಗಿದೆ.

ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ಪುನಿತ್‌ ರಾಜ್‌ ಕುಮಾರ್‌ ಅವರ ಬಯೋಗ್ರಫಿ ʻನೀನೇ ರಾಜಕುಮಾರʼ ಕೃತಿಯ ʻಲೋಹಿತ್‌ ಎಂಬ ಮರಿಮುದ್ದʼ ಎಂಬ ಕಥಾ ಭಾಗವನ್ನು ಪಠ್ಯದಲ್ಲಿ ಸೇರಿಸಿಕೊಳ್ಳಲಾಗಿದೆ.

ಪತ್ರಕರ್ತ ಡಾ.ಶರಣು ಹುಲ್ಲೂರು ಬರೆದ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಾಲ್ಕನೇ ಆವೃತ್ತಿಯನ್ನು ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ನೀನೇ ರಾಜಕುಮಾರ ಬಯೋಗ್ರಫಿ ಮುದ್ರಣ ಬಿಡುಗಡೆಗೊಳ್ಳುತ್ತಿದ್ದಂತೆ ಈ ಪುಸ್ತಕವು ಅಮೆಜಾನ್ , ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಇದರ ಜೊತೆಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.

ಇದನ್ನೂ ಓದಿ : ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್‌ ಲಸಿಕೆ: ಪೂರ್ಣ ವಿವರ ಇಲ್ಲಿದೆ

(Lohith emba marimudda) Department of Graduate Education has given a sweet news to Puneeth Rajkumar fans, now a lesson on Puneeth Rajkumar, the gem of Karnataka, has been included in the textbook of Bangalore University. An excerpt from Puneeth’s life is included in the Kannada language text of BCom degree third semester.

Comments are closed.