Red Alert School- college Holiday : ಮಂಗಳೂರು : ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಕೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 6 ರಂದು ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ (School College Holiday) ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 6೬ರಂದು ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ತೀರದಲ್ಲಿ ಇರುವವರು, ಸಮುದ್ರ ತೀರದಲ್ಲಿ ಇರುವವರು ಹಾಗೂ ತಗ್ಗು ಪ್ರದೇಶದಲ್ಲಿ ಇರುವವರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ, ಮೂಡಬಿದಿರೆ, ಬಂಟ್ವಾಳ, ಮಂಗಳೂರು ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದಲೂ ಭಾರೀ ಮಳೆಯಾಗುತ್ತಿದೆ. ಇಂದು ರೆಡ್ ಅಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಇಂದೂ ಕೂಡ ಮಳೆಯ ಆರ್ಭಟ ಹೆಚ್ಚಾಗಿರುವ ಸಾಧ್ಯತೆಯಿದೆ.
ಇದನ್ನೂ ಓದಿ : Udupi School Holiday : ಆರಿದ್ರಾ ಮಳೆಯ ಅಬ್ಬರ : ಜುಲೈ 6ರಂದು ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲೇ ಉಡುಪಿ ಜಿಲ್ಲೆಯಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬ್ರಹ್ಮಾವರ, ಕುಂದಾಪುರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ, ಕುಂದಾಪುರ, ಹೆಬ್ರಿ, ಕಾಪು, ಉಡುಪಿ, ಕಾರ್ಕಳ ಹಾಗೂ ಬೈಂದೂರು ತಾಲೂಕುಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಳವಾಗಿದ್ದು, ಹಲವು ಕಡೆಗಳಲ್ಲಿ ಕೃತಕ ನೆರೆ ಹಾವಳಿ ಉಂಟಾಗಿದೆ.
ಇದನ್ನೂ ಓದಿ : ರಾಹುಲ್ ದ್ರಾವಿಡ್ ಅದೃಷ್ಟವನ್ನೇ ಬದಲಿಸಿತು ರೋಹಿತ್ ಮಾಡಿದ ಅದೊಂದು ಫೋನ್ ಕಾಲ್
ಇಂದಿನಿಂದ ಪುನರ್ವಸು ಮಳೆ ಆರಂಭಗೊಳ್ಳಲಿದ್ದು, ಪುನರ್ವಸು ಮಳೆ ಆರ್ಭಟಿಸುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಈ ಜಿಲ್ಲೆಗಳಿಗೆ ಬಿಡುಗಡೆ : ನಿಮ್ಮ ಜಿಲ್ಲೆಯ ಹೆಸರು ಪಟ್ಟಿಯಲ್ಲಿದ್ಯಾ ಚೆಕ್ ಮಾಡಿ
Mangalore Dakshin Kannada Heavy rain School, college Holiday Red Alert Declared