School Reopen : ದ.ಕ ಜಿಲ್ಲೆಯಲ್ಲಿ ಶಾಲಾರಂಭ : ಹುಮ್ಮಸ್ಸಿನಿಂದಲೇ ಶಾಲೆಗೆ ಬಂದ್ರು ವಿದ್ಯಾರ್ಥಿಗಳು

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳು ಆರಂಭಗೊಂಡಿದೆ. ಕೊರೊನಾ ಭಯಬಿಟ್ಟು ವಿದ್ಯಾರ್ಥಿಗಳು ಹುಮ್ಮಸ್ಸಿನಿಂದಲೇ ಶಾಲೆಯತ್ತ ಹೆಜ್ಜೆಹಾಕಿದ್ದಾರೆ.

ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 8, 9 ಮತ್ತು 10ನೇ ತರಗತಿಗಳು ಆರಂಭಗೊಂಡಿವೆ. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಥರ್ಮಲ್‌ ಸ್ಕ್ಯಾನ್‌ ಮಾಡಲಾಗಿದೆ. ಜಿಲ್ಲೆಯಾದ್ಯಂತ ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ್ದು, ಅದ್ರಲ್ಲೂ ಮಂಗಳೂರು ನಗರದ ಕುಲಶೇಖರದಲ್ಲಿರುವ ಸೇಕ್ರೆಡ್‌ ಹಾರ್ಟ್‌ ಪ್ರೌಢಶಾಲೆಯಲ್ಲಿ ಶಾಲೆ ಬಂದ ವಿದ್ಯಾರ್ಥಿಗಳಿಗೆ ಶಿಕ್ಷಕರು ಧೈರ್ಯ ತುಂಬುವ ಕಾರ್ಯವನ್ನು ಮಾಡಿದ್ದಾರೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮುನ್ನೆಚ್ಚರಿಕೆಯನ್ನು ಕೈಗೊಳ್ಳಲಾಗುತ್ತಿದೆ. ಶಾಲೆಯಲ್ಲಿ ಥರ್ಮಲ್‌ ಸ್ಕ್ಯಾನ್‌, ಸ್ಯಾನಿಟೈಸರ್‌ ಹಾಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ತರಗತಿಗಳಲ್ಲಿ ಸಾಮಾಜಿಕ ಅಂತರವನ್ನು ಪಾಲನೆ ಮಾಡಲಾಗುತ್ತಿದೆ. ಒಂದು ಡೆಸ್ಕ್‌ ನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರವೇ ಕುಳಿತುಕೊಳ್ಳಲು ಅವಕಾಶವನ್ನು ಕಲ್ಪಿಸಲಾಗುತ್ತಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲಾರಂಭವಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾರಂಭವಾಗಿರಲಿಲ್ಲ. ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಹೆಮ್ಮಾರಿಯ ಆರ್ಭಟ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡಿತ್ತು. ಆದ್ರೀಗ ಜಿಲ್ಲಾಡಳಿತ ಅನುಮತಿ ನೀಡಿದ ಹಿನ್ನೆಲೆಯಲ್ಲಿಇಂದಿನಿಂದ ಶಾಲೆಗಳು ಆರಂಭಗೊಂಡಿದೆ. ಆದರೆ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುತ್ತಿಲ್ಲ. ಇನ್ನೊಂದೆಡೆಯಲ್ಲಿ ಕೆಲವು ಶಿಕ್ಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕಿದ್ದಾರೆ. ಇಂತಹ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್‌ ತರಗತಿಯನ್ನೂ ಕೂಡ ನಡೆಸುವಂತೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.

ಶಾಲಾರಂಭದ ಹಿನ್ನೆಲೆಯಲ್ಲಿ ತರಗತಿ ಕೋಣೆಗಳನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಅಲ್ಲದೇ ಶಾಲೆಯನ್ನು ಸಂಪೂರ್ಣವಾಗಿ ಸ್ವಚ್ಚತೆಯನ್ನು ಕಾಪಾಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕುಡಿಯಲು ಬಿಸಿ ನೀರನ್ನು ಶಾಲೆಯಿಂದಲೇ ಒದಗಿಸಲಾಗುತ್ತಿದ್ದು, ಉಪಹಾರವನ್ನು ಮನೆಯಿಂದಲೇ ತರುವಂತೆ ಸೂಚಿಸಲಾಗಿದೆ. 9 ಮತ್ತು 10ನೇ ತರಗತಿಗಳು ಬೆಳಗಿನ ವೇಳೆಯಲ್ಲಿ ಹಾಗೂ 8ನೇ ತರಗತಿಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿದೆ. ಇನ್ನು 6 ಮತ್ತು7 ನೇ ತರಗತಿಗಳು ಸಪ್ಟೆಂಬರ್‌ 20 ರಂದು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ದತೆಯನ್ನು ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ : Tuition Fees Relief : ವಿದ್ಯಾರ್ಥಿ, ಪೋಷಕರಿಗೆ ಗುಡ್‌ನ್ಯೂಸ್‌ ಕೊಟ್ಟ ಹೈಕೋರ್ಟ್‌

ಇದನ್ನೂ ಓದಿ : ಶಾಲಾ ಮಕ್ಕಳಿಗೆ ಕೊರೊನಾ ಟೆಸ್ಟ್‌ ಕಡ್ಡಾಯ : ಕೋವಿಡ್‌ ತಾಂತ್ರಿಕ ಸಮಿತಿ ಸಲಹೆ

ಇದನ್ನೂ ಓದಿ : ಶಾಲಾರಂಭದ ಬೆನ್ನಲ್ಲೇ ಬಿಗ್‌ ಶಾಕ್‌ : 73 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

(School Starts in DK District: Students come to school with enthusiasm )

Comments are closed.