Mangalore School Reopen : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಶಾಲೆ, ಕಾಲೇಜು ಆರಂಭ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಅದ್ರಲ್ಲೂ ಶಾಲಾರಂಭ ಕ್ಕೆ ಜಿಲ್ಲಾಧಿಕಾರಿಗಳು ಈಗಾಗಲೇ ಗ್ರೀನ್‌ ಸಿಗ್ನಲ್‌ ಕೊಟ್ಟಿದ್ದಾರೆ. ಹೀಗಾಗಿ ನಾಳೆ ( ಸಪ್ಟೆಂಬರ್‌ 17) ಯಿಂದ ಪ್ರೌಢಶಾಲೆಗಳು ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ದತೆಯನ್ನು ಪೂರ್ಣಗೊಳಿಸಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲಾರಂಭವಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾರಂಭವಾಗಿರಲಿಲ್ಲ. ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಹೆಮ್ಮಾರಿಯ ಆರ್ಭಟ ದಕ್ಷಿಣ ಕನ್ನಡ ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡಿತ್ತು. ಆದ್ರೀಗ ಜಿಲ್ಲಾಡಳಿತ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 17 ರಿಂದ 8, 9 ಮತ್ತು 10ನೇ ತರಗತಿಗಳು ಆರಂಭವಾಗಲಿದೆ. ಕೇರಳ ವಿದ್ಯಾರ್ಥಿಗಳ ಜೊತೆಗೆ ಶಾಲೆಗೆ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುವ ಪೋಷಕರ ಮಕ್ಕಳಿಗೆ ಆನ್‌ಲೈನ್‌ ಮೂಲಕ ತರಗತಿಯನ್ನು ನಡೆಸಲು ಸೂಚಿಸಲಾಗಿದೆ. 8 ನೇ ತರಗತಿಗಳು ಮಧ್ಯಾಹ್ನದ ವೇಳೆಯಲ್ಲಿ ನಡೆದ್ರೆ, 9 ಮತ್ತು 10ನೇ ತರಗತಿಗಳು ಬೆಳಗಿನ ವೇಳೆಯಲ್ಲಿ ನಡೆಯಲಿದೆ .

ಪದವಿ ಕಾಲೇಜುಗಳಲ್ಲಿ ಕೇವಲ ವಿಜ್ಞಾನ ವಿಭಾಗಕ್ಕೆ ಮಾತ್ರವೇ ಭೌತಿಕ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ. ಉಳಿದ ತರಗತಿಗಳ ಆರಂಭದ ಕುರಿತು ವಿವಿ ಆಡಳಿತ ಮಂಡಳಿಯ ಜೊತೆಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತೇವೆ. ಅಲ್ಲದೇ ಅಂತಿಮ ಪದವಿ ತರಗತಿಗಳ ಆರಂಭಕ್ಕೆ ಸಾಕಷ್ಟು ಮನವಿಗಳು ಬರುತ್ತಿದ್ದು ಶೀಘ್ರದಲ್ಲಿಯೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ರಾಜ್ಯದಾದ್ಯಂತ ಶಾಲೆ, ಕಾಲೇಜುಗಳು ಆರಂಭವಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸೋಂಕು ಹಾಗೂ ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಆರ್ಭಟದ ಹಿನ್ನೆಲೆಯಲ್ಲಿ ಶಾಲಾರಂಭವಾಗಿರಲಿಲ್ಲ. ಇದೀಗ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲೀಗ ಶಾಲೆಗಳನ್ನು ಆರಂಭಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಶಾಲಾರಂಭದ ಸಿದ್ದತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆಯನ್ನು ನೀಡಿದ್ದು, ಶಿಕ್ಷಣ ಇಲಾಖೆ ಸರ್ವ ರೀತಿಯಲ್ಲಿಯೂ ಸಜ್ಜಾಗಿದೆ.

ಇದನ್ನೂ ಓದಿ : Nipah Virus : ಮಂಗಳೂರು ಯುವಕನ ನಿಫಾ ವೈರಸ್‌ ವರದಿ ನೆಗೆಟಿವ್

ಇದನ್ನೂ ಓದಿ : Mangalore : ದಕ್ಷಿಣ ಕನ್ನಡದಲ್ಲಿ ಶಾಲಾರಂಭಕ್ಕೆ ಗ್ರೀನ್‌ಸಿಗ್ನಲ್‌

(School and college to begin tomorrow Dakshin kannada district )

Comments are closed.