ಮಂಗಳೂರು ಶಾಲೆ, ಪ.ಪೂ ಕಾಲೇಜುಗಳಿಗೆ ಜುಲೈ 19 ರಂದು ರಜೆ ಘೋಷಣೆ

Mangalore School Holiday : ಮಂಗಳೂರು : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನ ಶಾಲೆಗಳಿಗೆ ಜುಲೈ 19 ರಂದು ರಜೆ ಘೋಷಣೆ ಮಾಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಲ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜುಲೈ 19ರಂದು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Also Read : ಪಡಿತರ ಕಾರ್ಡ್‌ ತಿದ್ದುಪಡಿಗೆ ಜುಲೈ 31 ಕೊನೆಯ ದಿನ

Mangalore School Holiday : ಇನ್ನೆಷ್ಟು ದಿನ ಸುರಿಯಲಿದೆ ಮಳೆ ?

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಯ ಮುನ್ಸೂಚನೆಯಂತೆ ಕರ್ನಾಟಕದಲ್ಲಿ ಜುಲೈ 24 ರವರೆಗೂ ಭಾರೀ ಪ್ರಮಾಣದ ಮಳೆ ಮುಂದುವರಿಕೆ ಆಗುವ ಸಾಧ್ಯತೆ ಇದೆ.

ಅದರಲ್ಲೂ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭಾರೀ ಮಳೆ ನಿರೀಕ್ಷಿಸಲಾಗಿದೆ. ಕರ್ನಾಟಕದ ಒಳನಾಡಿನ ಕೆಲವೊಂದು ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Also Read : Exclusive : ಪರಶುರಾಮ ವಿವಾದ inside Story : ನಿಜಕ್ಕೂ ಅವ್ಯವಹಾರ ನಡೆದಿದ್ಯಾ ?

ಜುಲೈ 19 ರಿಂದ ಜುಲೈ 22 ರವರೆಗೆ ಕರಾವಳಿ ಕರ್ನಾಟಕದಲ್ಲಿ “ಅತಿ ಹೆಚ್ಚು ಭಾರೀ ಮಳೆ” ನಿರೀಕ್ಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 20ರವರೆಗೆ ಸಾಧಾರಣ ಮಳೆಯಾಗಲಿದ್ದು, ಜುಲೈ 20 ಮತ್ತು 21ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, , ರಾಯಚೂರು, ಬಳ್ಳಾರಿ, ಮೈಸೂರು, ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಹಗುರ ಮಳೆ ಮುಂದುವರಿಗೆ ಆಗಲಿದೆ.

Mangalore School Holiday declared July 19 schools Puc colleges in Kannada News

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021