ಮಂಗಳೂರು : ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್ 12 ರಂದು ನಿಗದಿಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮಂಗಳೂರು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಮಂಗಳೂರು ವಿವಿ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಮುಂದೂಡಿಕೆಯಾಗಿರುವ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದಿದ್ದಾರೆ.

ಆದರೆ ಉಳಿದ ಪರೀಕ್ಷೆಗಳು ಹಿಂದೆ ಪ್ರಕಟಿಸಿರುವ ವೇಳಾಪಟ್ಟಿ ಅಲ್ಲಿರುವಂತೆಯೇ ನಡೆಯಲಿದೆ.