ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಡಕಾಗುತ್ತಿದೆ. ಇದೇ ಕಾರಣಕ್ಕೆ ಮಂಗಳೂರು ವಿವಿ ಪರೀಕ್ಷೆಗಾಗಿ ಹೊಸ ಮಾರ್ಗವನ್ನು ಕಂಡುಕೊಂಡಿದ್ದು, ಈ ಬಾರಿ ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಲು ಚಿಂತನೆ ನಡೆಸಿದೆ.
ಕೊರೊನಾ ವೈರಸ್ ಸೋಂಕು ಕಡಿಮೆಯಾದ ಬೆನ್ನಲ್ಲೇ ಮಂಗಳೂರು ವಿವಿ ಪದವಿ ಪರೀಕ್ಷೆಯನ್ನು ಆರಂಭಿಸಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಹೆಚ್ಚಾಗಿ ಕೇರಳದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಪರೀಕ್ಷೆ ನಡೆಸಿದ್ರೆ ಸೋಂಕು ಹೆಚ್ಚುವ ಆತಂಕ ಇದೆ.
ಇದೀಗ ಮಂಗಳೂರು ವಿವಿ ಆನ್‌ಲೈನ್ ಮೂಲಕ ಪರೀಕ್ಷೆ ನಡೆಸಲು ಸಿದ್ದತೆ ನಡೆಸಿದೆ. ಅಲ್ಲದೇ ಪರೀಕ್ಷೆ ನಡೆಸಲು ವಿಶೇಷ ಸಾಫ್ಟವೇರ್ ಸಿದ್ದಪಡಿಸಿದೆ. ಈಗಾಗಲೇ ಪುಣೆ ವಿವಿ ಆನ್‌ಲೈನ್ ಮೂಲಕ ಪರೀಕ್ಷೆ ನಡೆಸುವ ಮೂಲಕ ಯಶಸ್ಸು ಕಂಡಿದೆ. ಈ ಸಾಫ್ಟ್‌ವೇರ್ ವಿದ್ಯಾರ್ಥಿಗಳ ಪರೀಕ್ಷಾ ನಕಲನ್ನು ತಡೆಯ ಬಲ್ಲದು. ಇದೀಗ ಮಂಗಳೂರು ವಿವಿ ಕೂಡ ಅದೇ ಹಾದಿಯಲ್ಲಿಯೇ ಸಾಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ| ಪಿ.ಎಸ್.ಯಡಿಪಡಿತ್ತಾಯ ಹೇಳಿದ್ದಾರೆ.
ಪದವಿ ತರಗತಿಯ ಹಲವು ಪರೀಕ್ಷೆಗಳು ಈಗಾಗಲೇ ಮುಕ್ತಾಯಗೊಂಡಿದ್ದು, 1 3, 5 ನೇ ಸೆಮಿಸ್ಟರ್ ಪರೀಕ್ಷೆಗಳು ಕೊನೆಯ ಹಂತದಲ್ಲಿವೆ. ಅಲ್ಲದೇ 2 ಮತ್ತು 4 ನೇ ತರಗತಿಯ ಸೆಮಿಸ್ಟರ್ ಫಾರ್ಮುಲಾ ಆಧಾರಿತ ಪ್ರಮೋಷನ್ ಮಾಡಲಾಗುತ್ತಿದೆ. ಆನ್‌ಲೈನ್ ಪರೀಕ್ಷೆಯ ಕುರಿತು ವಿವಿ ಸಿದ್ದತೆ ನಡೆಸಿದ್ದು, ಸದ್ಯದಲ್ಲಿಯೇ ಜಾರಿಗೆ ಬರಲಿದೆ.
ಇದನ್ನೂ ಓದಿ : ದ.ಕ. ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ : ಪದವಿ ಪರೀಕ್ಷೆ ಮುಂದೂಡಿಕೆ