ಮಂಗಳೂರು : ರಾಜ್ಯದಾದ್ಯಂತ ಕೊರೊನಾ ಹೆಮ್ಮಾರಿ ಆರ್ಭಟಿಸುತ್ತಿದೆ. ಅದ್ರಲ್ಲೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ನಿತ್ಯವೂ ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಶಾಲೆ, ಕಾಲೇಜುಗಳೇ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದ್ದರೂ ಕೂಡ ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಸಚಿವರು ಶಾಲೆಗಳನ್ನು ಆರಂಭಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಅಲ್ಲದೇ ಮಕ್ಕಳಿಗೆ ಶಿಕ್ಷಣವೇ ಮುಖ್ಯ ಅಂತಾ ಹೇಳುತ್ತಿದ್ದಾರೆ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಮಾತ್ರ ಸಾವಿರಾರು ವಿದ್ಯಾರ್ಥಿಗಳು ಗೈರು (Students Leave)ಹಾಜರಾಗುತ್ತಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಡಿಸೆಂಬರ್ ಆರಂಭದಿಂದಲೇ ಚಳಿಯ ಆರ್ಭಟ ಹೆಚ್ಚಾಗಿದೆ. ವರ್ಷಂಪ್ರತಿ ಮಕ್ಕಳು ಈ ತಿಂಗಳಲ್ಲಿ ಸಾಮಾನ್ಯವಾಗಿ ಶೀತ ಸಂಬಂಧಿ ರೋಗಕ್ಕೆ ತುತ್ತಾಗುತ್ತಾರೆ. ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಬಹುತೇಕ ಮಕ್ಕಳನ್ನು ಶೀತ, ಕೆಮ್ಮ, ಜ್ವರದಂತ ರೋಗ ಮಕ್ಕಳನ್ನು ಕಾಡುತ್ತಿದೆ. ಹೀಗಾಗಿಯೇ ಮಕ್ಕಳು ಶಾಲೆಗೆ ಗೈರು ಹಾಜರಾಗುತ್ತಿದ್ದಾರೆ. ಪ್ರತೀ ಶಾಲೆಯಲ್ಲಿಯೂ ಕನಿಷ್ಠ ೫೦ಕ್ಕೂ ಅಧಿಕ ವಿದ್ಯಾರ್ಥಿಗಳು ಶೀತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮೇಲ್ನೋಟಕ್ಕೆ ಕೊರೊನಾ ಸೋಂಕಿನ ಲಕ್ಷಣಗಳೇ ಕಂಡು ಬಂದಿದ್ದರೂ ಕೂಡ ಶಿಕ್ಷಣ ಇಲಾಖೆಯಾಗಲಿ, ಆರೋಗ್ಯ ಇಲಾಖೆಯಾಗಲಿ ಮಕ್ಕಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸುವ ಕಾರ್ಯವನ್ನು ಮಾಡುತ್ತಿಲ್ಲ.
ಉಡುಪಿ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಕ್ಕಳೇ ಹೆಚ್ಚು ಬಾಧಿತರಾಗಿದ್ದಾರೆ. ಎರಡೂ ಜಿಲ್ಲೆಗಳಲ್ಲಿಯೂ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಕೊರೊನಾ ಸೋಂಕು ಕಾಡುತ್ತಲೇ ಇದೆ. ಆದರೆ ಬಹುತೇಕ ಶಾಲೆಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೂ ಕೂಡ, ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿಲ್ಲ. ಇನ್ನು ಬಹುತೇಕ ಖಾಸಗಿ ಶಾಲೆಗಳಲ್ಲಿ ಕೊರೊನಾ ಸೋಂಕನ್ನು ಮುಚ್ಚಿಡುವ ಕಾರ್ಯ ನಡೆಯುತ್ತಲೇ ಇದೆ ಎಂಬ ಆರೋಪ ಕೇಳಿಬರುತ್ತಿದೆ.
ಕರಾವಳಿಯ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದಕ್ಕೆ ಶಾಲೆಗಳೇ ಕಾರಣವಾಗುತ್ತಿದೆ. ಆದರೆ ಇದನ್ನು ಒಪ್ಪಿಕೊಳ್ಳುವುದಕ್ಕೆ ಶಿಕ್ಷಣ ಸಚಿವರಾಗಲಿ, ಶಿಕ್ಷಣ ಇಲಾಖೆಯಾಗಲಿ ರೆಡಿಯಿಲ್ಲ. ಇನ್ನು ಕೊರೊನಾ ಲಸಿಕೆ ಪಡೆದಿರುವ ಸಾರ್ವಜನಿಕರಿಗೆ ನಿರ್ಬಂಧಗಳನ್ನು ಹೇರುವ ಸರಕಾರ ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯವಹಿಸುತ್ತಿದೆಯಾ ಅನ್ನೋ ಅನುಮಾನ ಕಾಡುತ್ತಿದೆ. ಕೊರೊನಾ ಲಸಿಕೆ ಪಡೆಯದವರು ಲಸಿಕೆ ಹಾಕಿಸಿಕೊಳ್ಳಿ, ಇಲ್ಲವಾದ್ರೆ ಅಪಾಯವಿದೆ ಎಂದು ಖುದ್ದು ಆರೋಗ್ಯ ಸಚಿವರೇ ಹೇಳುತ್ತಿದ್ದಾರೆ. ಆದರೆ ಸಾವಿರಾರು ಸಂಖ್ಯೆಯಲ್ಲಿ ಮಕ್ಕಳು ಅನಾರೋಗ್ಯದ ಕಾರಣದಿಂದಾಗಿ ನಿತ್ಯವೂ ಶಾಲೆಗೆ ಹಾಜರಾಗದೇ ಇದ್ದರೂ ಕೂಡ, ಮಕ್ಕಳ ರಜೆಯ ಹಿಂದಿನ ಸತ್ಯವನ್ನು ಹುಡುಕುವ ಕಾರ್ಯವನ್ನು ಶಿಕ್ಷಣ ಸಚಿವರು ಮಾಡುತ್ತಿಲ್ಲ.
ಶೀತ, ಜ್ವರಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿದ್ರೆ, ಶೇ.೯೦ರಷ್ಟು ಮಕ್ಕಳಲ್ಲಿ ಕೊರೊನಾ ಸೋಂಕು ದೃಢಪಡುತ್ತಿದೆ ಎಂದು ಬಹುತೇಕ ಮಕ್ಕಳ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಮೊದಲ ಅಲೆಯಿಂದ ಇಂದಿನವರೆಗೂ ಜನರು ಕೊರೊನಾ ಟೆಸ್ಟ್ ಮಾಡಿಸೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ, ಇದೀಗ ಮೂರನೇ ಅಲೆಯಲ್ಲಿ ಸರಕಾರವೇ ನಿರ್ಲಕ್ಷ್ಯ ವಹಿಸುತ್ತಿದ್ದಾಗ, ಜನರು ಹೆಚ್ಚಾಗಿ ಆಸಕ್ತಿ ತೋರಿಸುತ್ತಿಲ್ಲ. ಇದರಿಂದಲೇ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಅಂತಾ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ಕೊರೊನಾ ಮೊದಲ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ ಕೊರೊನಾ ಸೋಂಕಿಗೆ ಒಳಗಾದವರ ಮೇಲೆ ಜಿಲ್ಲಾಡಳಿತ ನಿಗಾ ಇರಿಸಿತ್ತು. ಅಲ್ಲದೇ ಪ್ರಾಥಮಿಕ ಸಂಪರ್ಕಿತರು ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ನಿಗಾ ಇರಿಸಲಾಗುತ್ತಿತ್ತು. ಆದ್ರೀಗ ಕೊರೊನಾ ಸೋಂಕಿತರು, ಪ್ರಾಥಮಿಕ ಸೋಂಕಿತರರು ಸಾರ್ವಜನಿಕವಾಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಕೂಡ ಸರಕಾರವಾಗಲಿ, ಜಿಲ್ಲಾಡಳಿತಗಳಾಗಲಿ ಕ್ರಮಕೈಗೊಳ್ಳುತ್ತಿಲ್ಲ. ಪರಿಸ್ಥಿತಿ ಇದೇ ರೀತಿಯಲ್ಲಿ ಮುಂದುವರಿದಿದ್ದೇ ಆದ್ರೆ ಕೊರೊನಾ ಮಹಾಸ್ಪೋಟ ಸಂಭವಿಸುವುದು ಖಚಿತ.
ಇದನ್ನೂ ಓದಿ : PUC 2022 Exam : ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಇದನ್ನೂ ಓದಿ : SSLC Preparatory Exam : ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
(minister worried about running a school, but increasing number of students leave in the school is ignoring the divine neglect of the education department)