ಮುಂಬೈ : ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ದಿನಂಪ್ರತಿ 2,000ಕ್ಕೂ ಮಂದಿ ಕೊರೊನಾ ಸೋಂಕಿಗೆ ಬಲಿಯಾಗುತ್ತಲೇ ಇದ್ದಾರೆ. ಈ ನುಡುವಲ್ಲೇ ಮಹಾರಾಷ್ಟ್ರ ಸರಕಾರ ಶಾಲೆಗಳನ್ನು ಆರಂಭಿಸುವುದಕ್ಕೆ ಮುಂದಾಗಿದೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 1.08 ಲಕ್ಷ ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಪತ್ತೆಯಾಗಿರುವ ಕೊರೊನಾ ಸೋಂಕಿತರ ಮೂರನೇ ಒಂದು ಭಾಗ ಮಹಾರಾಷ್ಟ್ರದವರೇ ಆಗಿದ್ದಾರೆ. ಅಲ್ಲದೇ ಮಹಾಮಾರಿ ಇದುವರೆಗೆ ಮಹಾರಾಷ್ಟ್ರದಲ್ಲಿ 3,950 ಮಂದಿಯನ್ನು ಬಲಿಪಡೆದಿದೆ. ಅಲ್ಲದೇ ದಿನೇ ದಿನೇ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಈ ನುಡವಲ್ಲೇ ಮಹಾರಾಷ್ಟ್ರ ಸರಕಾರ ಜುಲೈ 1ರಿಂದ ಹೈಸ್ಕೂಲು ಹಾಗೂ ಕಾಲೇಜುಗಳನ್ನು ಆರಂಭಿಸಲು ಮುಂದಾಗಿದೆ. ಅಲ್ಲದೇ ಅಗಸ್ಟ್ 1ರಿಂದ ಪ್ರಾಥಮಿಕ ಶಾಲೆಯನ್ನು ಪುನರಾರಂಭಿಸುವುದಾಗಿ ಹೇಳಿದೆ.