ಇಂದು NEET ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು : ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA ) ನಡೆಸುವ ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಸಂಜೆ 4 ಗಂಟೆಯ ವೇಳೆಗೆ ಎನ್ಟಿಎ ಫಲಿತಾಂಶವನ್ನು ಘೋಷಿಸಲಿದೆ.

ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಈ ಬಾರಿ ದೇಶಾದ್ಯಂತ ಸುಮಾರು 14.37 ಲಕ್ಷ ಅಭ್ಯರ್ಥಿಗಳು ನೀಟ್ ಪರೀಕ್ಷೆಯನ್ನು ಬರೆದಿದ್ದರು. ಕೊರೋನಾದಿಂದಾಗಿ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲಾಗಿತ್ತು.

ನೀಟ್ ಫಲಿತಾಂಶ ಎನ್ ಟಿಎ ನೀಟ್ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ. ಪರೀಕ್ಷೆ ಫಲಿತಾಂಶ ವೀಕ್ಷಿಸಲು ಮೇಲೆ ಕೊಟ್ಟಿರುವ ಲಿಂಕ್ ಕ್ಲಿಕ್ ಮಾಡಿ ಅಥವಾ ntaneet.nic.in ವೆಬ್ ಸೈಟ್ ಗೆ ಹೋಗಿ. ವೆಬ್ಸೈಟ್ನಲ್ಲಿರುವ ಡೌನ್ಲೋಡ್ ರಿಸಲ್ಟ್ ಎಂಬಲ್ಲಿ ಕ್ಲಿಕ್ ಮಾಡಿ. ನಿಮ್ಮ ರಿಜಿಸ್ಟ್ರೇಷನ್ ನಂಬರ್, ರೋಲ್ ನಂಬರ್ ನಮೂದಿಸಿ. ಆಗ ನಿಮ್ಮ ಫಲಿತಾಂಶ ವೆಬ್ಸೈಟ್ನ ಸ್ಕ್ರೀನ್ ಮೇಲೆ ಕಾಣುವುದು. ಆ ಫಲಿತಾಂಶದ ಸ್ಕ್ರೀನ್ ಅನ್ನು ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದಿಟ್ಟುಕೊಳ್ಳಬಹುದಾಗಿದೆ.

Comments are closed.