NEET – PG ಪರೀಕ್ಷೆ 4 ತಿಂಗಳು ಮುಂದೂಡಿಕೆ : ಕೊರೊನಾ ಹಿನ್ನೆಲೆ ಕೇಂದ್ರ ಸರಕಾರದ ಆದೇಶ

ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನ ಎರಡನೇ ಅಲೆಯ ತೀವ್ರತೆ ಹೆಚ್ಚಿದ್ದು, NEET – PG ಪರೀಕ್ಷೆಗಳನ್ನು ಕನಿಷ್ಠ ನಾಲ್ಕು ತಿಂಗಳ ಕಾಲ ಮುಂದೂಡಿಕೆ ಮಾಡಲಾಗಿದೆ‌ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.

ಹಿಂದೆ ಅಗಸ್ಟ್ ತಿಂಗಳಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವು ದಾಗಿ ಕೇಂದ್ರ ಸರಕಾರ ಘೋಷಣೆಯನ್ನು ಮಾಡಿತ್ತು. ಆದರೆ ಇದೀಗ ನೀಟ್-ಪಿಜಿಯನ್ನ ಕನಿಷ್ಠ 4 ತಿಂಗಳವರೆಗೆ ಮುಂದೂಡುವ ನಿರ್ಧಾರ ವನ್ನು ತೆಗೆದುಕೊಳ್ಳಲಾಗಿದೆ. ಹೀಗಾಗಿ  ಆಗಸ್ಟ್ 31ರ‌ ಮೊದಲು ಪರೀಕ್ಷೆ ನಡೆಯುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನು ಪರೀಕ್ದೆಯನ್ನು ನಡೆಸುವ ಮೊದಲು ವಿದ್ಯಾರ್ಥಿಗಳಿಗೆ ಕನಿಷ್ಠ 1 ತಿಂಗಳ ಕಾಲಾವಕಾಶವನ್ನು ನೀಡಲಾಗುತ್ತದೆ. ನೀಟ್ ಹಾಗೂ ಪಿಜಿ ಪರೀಕ್ಷೆ ಮುಂದೂಡಿಕೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ಕೋವಿಡ್ ನಿರ್ವಹಣಾ ಕಾರ್ಯಕ್ಕೆ ಬಳಸಿಕೊಳ್ಳಲು ಮುಂದಾಗಿದೆ.

Comments are closed.