ಸೋಮವಾರ, ಏಪ್ರಿಲ್ 28, 2025
HomeeducationNew guidelines for schools: 10, 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಶಾಲೆಗಳಿಗೆ...

New guidelines for schools: 10, 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಶಾಲೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ

- Advertisement -

ಬೆಂಗಳೂರು: (New guidelines for schools) ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಇದೀಗ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಎಲ್ಲಾ ಶಾಲೆಗಳಿಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸಿಬಿಎಸ್​ಸಿ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಂದು ಪ್ರಾರಂಭವಾಗಿದ್ದು, 10 ನೇ ತರಗತಿಗೆ ಮಾರ್ಚ್ 21 ರಂದು ಪರೀಕ್ಷೆಗಳು ಮುಕ್ತಾಯಗೊಂಡರೆ, 12 ನೇ ತರಗತಿಗೆ ಏಪ್ರಿಲ್ 5 ರಂದು ಮುಕ್ತಾಯಗೊಳ್ಳಲಿದೆ.

ಇದೀಗ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸುತ್ತಿರುವ ಎಲ್ಲಾ ಶಾಲೆಗಳಿಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅಧಿಕೃತ ಅಧಿಸೂಚನೆಯ ಪ್ರಕಾರ, ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಎಲ್ಲಾ ಶಾಲೆಗಳು ಉತ್ತರ ಪುಸ್ತಕಗಳನ್ನು ಅಂಚೆ ಸೇವೆಗಳ ಮೂಲಕ ಸಂಬಂಧಪಟ್ಟ ಪ್ರಾದೇಶಿಕ ಕಚೇರಿಗೆ ಕಳುಹಿಸುವಾಗ ಎಲ್ಲಾ ಉತ್ತರ ಪುಸ್ತಕಗಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ಕಳಿಸತಕ್ಕದ್ದು. ಆದರೆ, ಈ ಉತ್ತರ ಪುಸ್ತಕಗಳನ್ನು ವೈಯಕ್ತಿಕವಾಗಿ ಅಥವಾ ನಗರ ಸಂಯೋಜಕರ ಸಹಾಯದಿಂದ ಪ್ರಾದೇಶಿಕ ಕಚೇರಿಗೆ ತಲುಪಿಸಿದರೆ, ಪ್ಲಾಸ್ಟಿಕ್ ಚೀಲಗಳನ್ನು ಬಳಸಬೇಕಿಲ್ಲ.

ಸಿಬಿಎಸ್‌ಇ ಅಥವಾ ಬೋರ್ಡ್ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಇತರ ಅಧಿಕಾರಿಗಳೊಂದಿಗೆ ಸಂಪರ್ಕವನ್ನು ನಿಷೇಧಿಸಿದೆ. ಪರೀಕ್ಷೆಯ ಸಮಯದಲ್ಲಿ ಯಾವುದೇ ವಾಟ್ಸಾಪ್ ಸಂದೇಶವನ್ನು ಕಳುಹಿಸಬಾರದು ಎಂದು ಮಂಡಳಿಯು ಆದೇಶಿಸಿದೆ. ಬೋರ್ಡ್ ಪರೀಕ್ಷೆಯ ಕುರಿತು ಯಾವುದೇ ಅನುಮಾನವಿದ್ದಲ್ಲಿ ಸಿಬಿಎಸ್‌ಇ ನೀಡಿರುವ ಅಧಿಕೃತ ಲಿಂಕ್ ಬಳಸಿ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು ಎಂದು ಮಂಡಳಿಯು ಸೂಚನೆ ನೀಡಿದೆ

ಸಿಬಿಎಸ್‌ಇ ನೀಡಿರುವ ಅಧಿಕೃತ ಲಿಂಕ್: parikshasangam.cbse.gov.in

CBSE 10 ಮತ್ತು 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗಿದ್ದು, 10 ನೇ ತರಗತಿಗೆ ಮಾರ್ಚ್ 21 ರಂದು ಮತ್ತು 12 ನೇ ತರಗತಿಗೆ ಏಪ್ರಿಲ್ 5 ರಂದು ಪರೀಕ್ಷೆಗಳು ಮುಕ್ತಾಯಗೊಳ್ಳಲಿದೆ. ಈ ವರ್ಷ ಸುಮಾರು 38 ಲಕ್ಷ ವಿದ್ಯಾರ್ಥಿಗಳು CBSE ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ. 10ನೇ ತರಗತಿಗೆ ಒಟ್ಟು ನೋಂದಾಯಿತ ಅಭ್ಯರ್ಥಿಗಳ ಸಂಖ್ಯೆ 21.8 ಲಕ್ಷ, ಅದರಲ್ಲಿ 9.39 ಲಕ್ಷ ವಿದ್ಯಾರ್ಥಿನಿಯರು, 12.4 ಲಕ್ಷ ಪುರುಷ ಅಭ್ಯರ್ಥಿಗಳು ಮತ್ತು 10 ವಿದ್ಯಾರ್ಥಿಗಳು ‘ಇತರರು’ ವರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಶಾಲಾ ಶಿಕ್ಷಕರ ನೇಮಕಾತಿ : ಇನ್ನೊಂದು ವಾರದಲ್ಲಿ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಈ ವರ್ಷದ 12 ನೇ ಬೋರ್ಡ್ ಪರೀಕ್ಷೆಗಳಿಗೆ 16.9 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ 16 ಲಕ್ಷ ವಿದ್ಯಾರ್ಥಿಗಳಲ್ಲಿ 7.4 ಲಕ್ಷ ವಿದ್ಯಾರ್ಥಿನಿಯರು, 9.51 ಲಕ್ಷ ಪುರುಷ ಅಭ್ಯರ್ಥಿಗಳು ಮತ್ತು 5 ಮಂದಿ ‘ಇತರರು’ ವರ್ಗದಲ್ಲಿ ನೋಂದಾಯಿಸಿಕೊಂಡಿದ್ದಾರೆ.

New guidelines for schools: New guidelines released for schools conducting class 10, 12 board exams

RELATED ARTICLES

Most Popular