New Universities: 6 ಹೊಸ ಖಾಸಗಿ ವಿಶ್ವವಿದ್ಯಾಲಯಗಳಿಗೆ ವಿಧಾನಸಭೆಯಲ್ಲಿ ಅನುಮೋದನೆ

ಬೆಂಗಳೂರು: (New Universities) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಪಕ್ಷಗಳು ಹೆಣಗಾಡುತ್ತಿವೆ. ಈ ಮಧ್ಯೆ ಕೈಪಾಳಯದವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರೆ, ಬಿಜೆಪಿ ಜನರನ್ನ ತನ್ನತ್ತ ಸೆಳೆಯಲು ಮಾಸ್ಟರ್‌ ಪ್ಲ್ಯಾನ್‌ ಮಾಡುತ್ತಿದೆ. ಈ ಮಧ್ಯೆ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಲು ಸರ್ಕಾರ ಆರು ಹೊಸ ಖಾಸಗಿ ವಿಶ್ವವಿದ್ಯಾಲಯಗಳಿಗೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದೆ.

ಡಬಲ್‌ ಇಂಜಿನ್‌ ಸರಕಾರದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗಾಗಿ ವಿಶೇಷ ಕಾಳಜಿಯನ್ನು ವಹಿಸಿಕೊಂಡಿದ್ದು, ರಾಜ್ಯದ ಶಿಕ್ಷಣ ಕ್ಷೇತ್ರ ಮುಂದುವರೆದಿದೆ. ಉತ್ತಮ ಗುಣಮಟ್ಟದ ಶಿಕ್ಷಣದಿಂದ ಮಾತ್ರ ದೇಶದ ನಿಜವಾದ ಅಭಿವೃದ್ದಿಯಾಗುತ್ತದೆ. ಇದನ್ನು ಮನಗಂಡ ಬಿಜೆಪಿ ಸರಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿರುವ ಬಿಜೆಪಿ ಸರಕಾರ ಅವಧಿಯಲ್ಲಿ ಶಾಲೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಯನ್ನು ಮೆಲ್ದರ್ಜೆಗೇರಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಲು ಅವಕಾಶ ನೀಡಿದೆ.

ಇದೀಗ ಬೊಮ್ಮಾಯಿ ಸರಕಾರ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಲು ದಿಟ್ಟ ಹೆಜ್ಜೆಯಿಟ್ಟಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಇದು ಹೊಸ ಮೈಲಿಗಲ್ಲಾಗಿದೆ. ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಲು ಸರ್ಕಾರ ಆರು ಹೊಸ ಖಾಸಗಿ ವಿಶ್ವವಿದ್ಯಾಲಯಗಳಿಗೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿದೆ.

ರಾಜ್ಯದಲ್ಲಿನ ಆರು ಖಾಸಗಿ ವಿಶ್ವವಿದ್ಯಾಲಯಗಳು
ಕಿಷ್ಕಿಂದೆ, ಆಚಾರ್ಯ, ಸಪ್ತಗಿರಿ, ಜೆ.ಎಂ, ಟಿ.ಜಾನ್‌, ರಾಜ್ಯ ಒಕ್ಕಲಿಗ ವಿಶ್ವವಿದ್ಯಾಲಯಗಳಿಗೆ ಅನುಮೋದನೆಯನ್ನು ಪಡೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಕ್ಷೇತ್ರದ ಅಭಿವೃದ್ದಿಗೆ ಬಿಜೆಪಿ ಸರಕಾರ ದಾಪುಗಾಲಿಟ್ಟಿದೆ.

ಇದನ್ನೂ ಓದಿ : ಸುಪ್ರಿಂ ಕೋರ್ಟ್‌ ಆದೇಶಕ್ಕೆ ವಿರುದ್ದವಾಗಿ ಸಿದ್ದು ರೀಡೂ: ಸಿಎಂ ವಾಗ್ದಾಳಿ

ಸುಪ್ರಿಂ ಕೋರ್ಟ್‌ ಆದೇಶಕ್ಕೆ ವಿರುದ್ದವಾಗಿ ಸಿದ್ದು ರೀಡೂ: ಸಿಎಂ ವಾಗ್ದಾಳಿ

ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್‌ ಹಗರಣದ ಮೂಲಕ ಎಂಟು ಸಾವಿರ ಕೋಟಿ ರೂ ಗಳಷ್ಟು ಬೃಹತ್‌ ಭ್ರಷ್ಟಾಚಾರ ನಡೆದಿದೆ. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವು ಎಂದು ಸಿದ್ದು ಕಾಲದ ಅರ್ಕಾವತಿ ಡಿನೋಟಿಫಿಕೇಷನ್‌ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯ ಆಯ್ದ ಭಾಗವನ್ನಿ ಸದನದಲ್ಲಿ ಪ್ರಸ್ತಾಪಿಸಿದ ಮುಖ್ಯಮಂತ್ರಿ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಅಲ್ಲದೇ ಜಮೀನು ಮಾಲೀಕರ ಹಿತಾಸಕ್ತಿಗಾಗಿ ಎಂಟುನೂರಕ್ಕೂ ಹೆಚ್ಚು ಎಕರೆ ಜಮೀನನ್ನು ರೀಡೂ ಹೆಸರಿನಲ್ಲಿ ಡಿನೋಟಿಫಿಕೇಷನ್‌ ಮಾಡಿರುವುದು ಸತ್ಯ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದರು ಎಂದು ಬೊಮ್ಮಾಯಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಕನ್ನಡ ಬಳಕೆ ಕಡ್ಡಾಯ : ವಿಧಾನಸಭೆಯಲ್ಲಿ ʻಕನ್ನಡ ಕಾಯ್ದೆʼ ಅಂಗೀಕಾರ

ಇದನ್ನೂ ಓದಿ : ಬಣ್ಣಗಳ ಹಬ್ಬ ಹೋಳಿಯ ಬಗ್ಗೆ ಇಲ್ಲಿದೆ ಇಂಟರಸ್ಟಿಂಗ್‌ ಸ್ಟೋರಿ

New Universities: Assembly approves 6 new private universities

Comments are closed.