ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿಯ ಶೈಕ್ಷಣಿಕ ಚಟುವಟಿಕೆಗಳು ತಡವಾಗಿ ಆರಂಭವಾಗಿದೆ. ಆದರೆ ಜುಲೈ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೋವಿಡ್ ತಾಂತ್ರಿಕ ಸಮಿತಿಯ ಸಭೆಯಲ್ಲಿ ಪಾಲ್ಗೊಂಡ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠೀಯಲ್ಲಿ ಮಾತನಾಡಿದ್ದಾರೆ. ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಭೀತಿಯಿದೆ. ಹೀಗಾಗಿ ಪ್ರಸಕ್ತ ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ವರ್ಷವನ್ನು ಆರಂಭಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಂದಿನ ವರ್ಷದ ಶೈಕ್ಷಣಿಕ ಚಟುವಟಿಕೆಗಳು ಜುಲೈ 15ರಿಂದ ಆರಂಭಗೊಳ್ಳಲಿದೆ ಎಂದಿದ್ದಾರೆ.
ಇನ್ನು ಸಿಬಿಎಸ್ ಇ ಎಪ್ರೀಲ್ 1ರಿಂದಲೇ ಮುಂದಿನ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದಿದ್ದಾರೆ. ಇದಕ್ಕೆ ಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.