ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ 1ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಎಲ್ಲಾ ವಿದ್ಯಾರ್ಥಿಗಳನ್ನು ಈ ಬಾರಿ ಉತ್ತೀರ್ಣಗೊಳಿಸುವ ಕುರಿತು ರಾಜ್ಯ ಸರಕಾರ ತೀರ್ಮಾನಿಸಿದೆ. ಅಲ್ಲದೇ ಪರೀಕ್ಷೆಯಿಲ್ಲದೇ ಉತ್ತೀರ್ಣಗೊಳಿಸುವ ಕುರಿತು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿಯೂ ಹೇಳಿದ್ದರು.

https://kannada.newsnext.live/corona-virus-hike-no-exams-all-students-pass/

ಆದರೆ ಸುರೇಶ್ ಕುಮಾರ್ ಈ ಕುರಿತು ಪ್ರತಿಕ್ರಿಯಿಸಿದ್ದು, ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ದತೆ ನಡೆಸುತ್ತಿದೆ. ಸದ್ಯ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ನಾವು ಆ ಬಗ್ಗೆ ತೀರ್ಮಾನಿಸಿಯೂ ಇಲ್ಲ. ಹೀಗಾಗಿ ಆರೋಗ್ಯ ಸಚಿವರ ಜೊತೆಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

https://kannada.newsnext.live/corona-virus-second-waves-karnatka/

Comments are closed.