ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿ ಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡುವ ಕುರಿತು ಆದೇಶ ಹೊರಡಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಈಗಾಗಲೇ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ಅಲ್ಲದೇ ಒಂದೆರಡು ದಿನಗಳಲ್ಲಿ ಪರೀಕ್ಷೆಯ ಕುರಿತು ನಿರ್ಧಾರ ಪ್ರಕಟಿಸುವುದಾ ಗಿಯೂ ಶಿಕ್ಷಣ ಸಚಿವರು ತಿಳಿಸಿದ್ದರು.

ಇದೀಗ ಶಿಕ್ಷಣ ಇಲಾಖೆ ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧಾರ ಮಾಡಿದೆ. ಪ್ರಮುಖವಾಗಿ ವಿಶೇಷ ವಿಶ್ಲೇಷಣಾ ಮೌಲ್ಯಾಂಕನ ಆಧರಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿಯೂ ತಿಳಿಸಿದೆ.


