ಶಿಕ್ಷಕರು, ಸಿಬ್ಬಂದಿಗಳ ಬಾಕಿ ವೇತನ ಬಿಲ್ಲು ಸಲ್ಲಿಸಲು DDOಗಳಿಗೆ ಶಿಕ್ಷಣ ಇಲಾಖೆ ಆಯುಕ್ತರ ಆದೇಶ

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಭೋಧಕ ಹಾಗೂ ಭೋದಕೇತರ ಸಿಬ್ಬಂದಿಗಳ ವೇತನ ಬಿಲ್ಲುಗಳನ್ನು  DDOಗಳು  ಖಜಾನೆಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ವಿ.ಅನ್ಬುಕುಮಾರ್ ಆದೇಶ ಹೊರಡಿಸಿದ್ದಾರೆ.

2020-21ನೇ ಆರ್ಥಿಕ ಸಾಲಿನಲ್ಲಿ ಬಾಕಿ ಇರುವ ಎಲ್ಲಾ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲು ರಾಜ್ಯದ ಎಲ್ಲಾ ಡಿಡಿಒ ಮಾರ್ಚ್ 8ರ ಒಳಗಾಗಿ ಸಲ್ಲಿಸಬೇಕಾಗಿದೆ.

ಅಲ್ಲದೇ ಜಿಲ್ಲಾ ನೋಡೆಲ್ ಅಧಿಕಾರಿಗಳು ತಮಗೆ ಹಂಚಿಕೆಯಾಗಿರುವ ಜಿಲ್ಲೆಗಳ ಎಲ್ಲಾ ಡಿಡಿಒಗಳನ್ನು ಸಂಪರ್ಕಿಸಿ ಯಾವುದೇ ವೇತನದ ಬಿಲ್ಲುಗಳು ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು. ಎಲ್ಲಾ ವೇತನ ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸಲಾಗಿರುವುದನ್ನು ಖಚಿತ ಪಡಿಸಿಕೊಂಡು ಮಾರ್ಚ್ 8 ರ ಸಂಜೆ 5 ಗಂಟೆಯೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ.

Comments are closed.