PG-CET Exam : 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದ್ದು, ಪಿಜಿಸಿಇಟಿ ಜುಲೈ 13, 14ಕ್ಕೆ ಪರೀಕ್ಷೆ ನಡೆಯಲಿದೆ. ಎಂ.ಬಿ.ಎ., ಎಂ.ಸಿ.ಎ., ಎಂ.ಟೆಕ್, ಎಂ.ಇ., ಎಂ.ಆರ್ಕಿಟೆಕ್ಚರ್ ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ-24) ನಿಗದಿಪಡಿಸಲಾಗಿದೆ.

ಎಂಇ-ಎಂ.ಟೆಕ್- ಎಂ.ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಜುಲೈ 13 ರಂದು ನಡೆಯಲಿದ್ದು, ಎಂಸಿಎ ಮತ್ತು ಎಂಬಿಎ ಕೋರ್ಸ್ ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲು ತೀರ್ಮಾನಿಸಲಾಗುತ್ತದೆ. ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು ಜೂನ್ 18 ರಂದು ಶುಲ್ಕ ಪಾವತಿಸಲು ಕೊನೆ ದಿನಾಂಕವಾಗಿದೆ. ಇನ್ನು ಗೇಟ್ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿಸಿಇಟಿ-24 ಗೆ ಹಾಜರಾಗುವ ಅಗತ್ಯ ಇಲ್ಲ.
ಆದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ, ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ರಾಜ್ಯ ಪಠ್ಯಕ್ರಮಕ್ಕೆ ಅನುಮತಿ, ಕೇಂದ್ರ ಪಠ್ಯಕ್ರಮ ಬೋಧನೆ: ಪರೀಕ್ಷಾ ಎಡವಟ್ಟಿನಿಂದ ಬಯಲಾಯ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಅಕ್ರಮ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾಹಿತಿಯಂತೆ, ಪಿಜಿ-ಸಿಇಟಿ ಪರೀಕ್ಷೆಗೆ ಮೇ 27ರಿಂದ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜೂನ್ 17 ಕೊನೆಯ ದಿನವಾಗಿರುತ್ತದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು. ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಗೇಟ್ (GATE) ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಪಿಜಿ-ಸಿಇಟಿ 2024ಕ್ಕೆ ಹಾಜರಾಗುವ ಅಗತ್ಯ ಇಲ್ಲ. ಆದರೆ, ಅಂತಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಿ,
ಪ್ರವೇಶಕ್ಕೆ ಅರ್ಹರಾಗಬೇಕಾಗುತ್ತದೆ. ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆಯೇ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುತ್ತದೆ. ಕರ್ನಾಟಕೇತರ ಅಭ್ಯರ್ಥಿಗಳು ಎಂಬಿಎ ಮತ್ತು ಎಂಸಿಎ ಪ್ರವೇಶಕ್ಕೆ ಆಡಳಿತ ಮಂಡಳಿಯವರು ಸರ್ಕಾರಕ್ಕೆ ಬಿಟ್ಟುಕೊಡುವ ಸೀಟುಗಳನ್ನು ಮಾತ್ರ ಆಯ್ಕೆ ಮಾಡಲು ಅರ್ಹತೆ ಪಡೆಯುತ್ತಾರೆ. ಕರ್ನಾಟಕೇತರ ಅಭ್ಯರ್ಥಿಗಳಿಗೆ ಯಾವುದೇ ಮೀಸಲಾತಿಯ ಸವಲತ್ತುಗಳು ಅನ್ವಯಿಸುವುದಿಲ್ಲ. ಆದ್ದರಿಂದ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವ ಕನಿಷ್ಠ ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ (50%) ಅರ್ಹತೆಯನ್ನು ಪಡೆಯಬಹುದಾಗಿದೆ.
ಇದನ್ನೂ ಓದಿ : ಅವಧಿಗೂ ಮುನ್ನ ಶಾಲಾರಂಭ: ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳ ಹಕ್ಕು ಆಯೋಗದಿಂದ ಶಾಕ್

ಜೊತೆಗೆ, ಪ್ರವೇಶಕ್ಕಾಗಿ ನೊಂದಣಿಯನ್ನು ಮಾಡಿ ಕೊಳ್ಳಬಹುದಾಗಿದೆ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ರಾಜ್ಯದ ಎಲ್ಲ ಎಂಬಿಎ / ಎಂಸಿಎ /ಎಂಇ /ಎಂ.ಟೆಕ್ /ಎಂ.ಆರ್ಕಿಟೆಕ್ಟರ್ ಕೋರ್ಸುಗಳ ಪ್ರವೇಶಕ್ಕೆ, ಅಭ್ಯರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಒಟ್ಟು ಕನಿಷ್ಟ ಶೇ.50%, ಹಾಗೂ ಕರ್ನಾಟಕದ ಎಸ್.ಸಿ., ಎಸ್.ಟಿ., ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಟ ಶೇ.45% ಅಂಕಗಳನ್ನು ಪಡೆದಿರಬೇಕು.
ಇದನ್ನೂ ಓದಿ : ಕನ್ನಡದಲ್ಲೇ ಐಎಎಸ್ ಬರೆಯಬೇಕಾ ? ಇಲ್ಲಿದೆ ಸರಳವಾದ ಟಿಪ್ಸ್
CGPA / SGPA ಗ್ರೇಡ್‌ಗಳ ಮಾದರಿಯಲ್ಲಿ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಯ ಅಂಕಗಳು, ಅಗತ್ಯವಿರುವ ಕನಿಷ್ಟ ಅರ್ಹತಾ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಗ್ರೇಡ್‌ಗಳ ಅಂಕಗಳು ಸೂಚಿಸುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಿ. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇನ್ನು ಪರೀಕ್ಷೆಗೆ ಹಾಜರಾಗುವ ಬಗ್ಗೆ ಅಥವಾ ಪ್ರವೇಶಾವಕಾಶದ ಬಗ್ಗೆ ಯಾವುದೇ ಸಂದೇಹವಿದ್ದರೇ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಇಲಾಖೆ ಸೂಚಿಸಿದೆ.
PG-CET Exam on July 13-14 June 17 is the last day for application