ಪ್ರಧಾನಿ ನರೇಂದ್ರ ಮೋದಿ ಭೇಟಿ : ಈ ಕಾಲೇಜುಗಳಿಗೆ ರಜೆ ಘೋಷಣೆ


ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 20ರ ಸೋಮವಾರದಂದು ನಗರಕ್ಕೆ ಆಗಮಿಸುತ್ತಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ, ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ (College Holiday Declared) ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಸರಕಾರ ಆದೇಶ ಹೊರಡಿಸಿದೆ. ಇದರಂತೆ, ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೋದಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಗಾಗಿ ಪರಿಶೀಲನೆಯನ್ನು ನಡೆಸಲಾಗಿದೆ. ಬೆಳಗ್ಗೆ ೧೧.೫೫ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಯಲಹಂಕದಲ್ಲಿರುವ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರದಲ್ಲಿ ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಹೆಲಿಕಾಫ್ಟರ್‌ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲದೇ ಬ್ರೈನ್‌ ಸೆಲ್‌ ಅಭಿವೃದ್ದಿ ಕೇಂದ್ರವನ್ನು ಉದ್ಘಾಟಿಸಲಿದ್ದು, ಮೈಂಡ್‌ ಟ್ರೀ ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡಿರುವ ಸಂಶೋಧನಾ ಆಸ್ಪತ್ರೆಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರ ನೇತೃತ್ವದಲ್ಲಿ ಈಗಾಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು ಹಾಗೂ ಸಚಿವರು ಮೋದಿ ಅವರ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ : Karnataka 2nd PUC Result : ದ್ವಿತೀಯ ಪಿಯುಸಿ ಟಾಪರ್​ಗಳು ಹಾಗೂ ಜಿಲ್ಲಾವಾರು ಟಾಪ್​​ ಲಿಸ್ಟ್​ ಇಲ್ಲಿದೆ ನೋಡಿ

ಇದನ್ನೂ ಓದಿ : ತೀವ್ರ ಆರ್ಥಿಕ ಸಂಕಷ್ಟ : ನಾಳೆಯಿಂದ ಸರ್ಕಾರಿ ಕಚೇರಿ, ಶಾಲೆಗಳು ಬಂದ್

Prime Minister Narendra Modi visit Bangalore, College Holiday Declared

Comments are closed.