ಬೆಂಗಳೂರು : ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರಕಾರ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಘೋಷಣೆ ಮಾಡಿದ್ದ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಪರಿಹಾರ ಫ್ಯಾಕೇಜ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 10,347.25 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ತಮ್ಮ ದಾಖಲೆಗಳನ್ನು ಸಲ್ಲಿಸಿರುವ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂಧಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ. ಈಗಾಗಲೇ ಅನುದಾನ ಬಿಡುಗಡೆಗೆ ಆದೇಶ ಮಾಡಲಾಗಿದ್ದು, ಸದ್ಯದಲ್ಲಿಯೇ ಕೋವಿಡ್ ಪರಿಹಾರದ ಅನುಕೂಲ ಲಭ್ಯವಾಗಲಿದೆ.
