Good News : ಶಿಕ್ಷಕರು -ಬೋಧಕೇತರ ಸಿಬ್ಬಂದಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರಕಾರ ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಘೋಷಣೆ ಮಾಡಿದ್ದ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳು ಸರಿಯಾಗಿ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಶೇಷ ಪರಿಹಾರ ಪ್ಯಾಕೇಜ್‌ ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಪರಿಹಾರ ಫ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 10,347.25 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಈಗಾಗಲೇ ತಮ್ಮ ದಾಖಲೆಗಳನ್ನು ಸಲ್ಲಿಸಿರುವ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂಧಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆಯಾಗಲಿದೆ. ಈಗಾಗಲೇ ಅನುದಾನ ಬಿಡುಗಡೆಗೆ ಆದೇಶ ಮಾಡಲಾಗಿದ್ದು, ಸದ್ಯದಲ್ಲಿಯೇ ಕೋವಿಡ್‌ ಪರಿಹಾರದ ಅನುಕೂಲ ಲಭ್ಯವಾಗಲಿದೆ.

Comments are closed.