ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : 1 ದಿನದ ವೇತನ ದೇಣಿಗೆ ನೀಡಲು ಸರಕಾರಿ ಶಿಕ್ಷಕರ ಒಪ್ಪಿಗೆ

0

ಬೆಂಗಳೂರು : ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವಿನಹಸ್ತ ಚಾಚುವಂತೆ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.

ಸರ್ಕಾರಿ ಶಿಕ್ಷಕರು ಖಾಸಗಿ ಶಾಲೆಗಳಲ್ಲಿ ದುಡಿಯುವ ತಮ್ಮ ಸಹವರ್ತಿಗಳಿಗೆ ಒಂದು ದಿನದ ವೇತನವನ್ನು ನೀಡಲು ಒಪ್ಪಿಕೊಂಡಿದ್ದಾರೆ, ಖಾಸಗಿ ಶಾಲೆಗಳ ಆಡಳಿತ ಮಂಡಳಿ ವೇತನ ಪಾವತಿಸದ ಕಾರಣ ಅವರು ಸಂಕಷ್ಟದಲ್ಲಿದ್ದಾರೆ, ಲಾಕ್‌ಡೌನ್‌ನಿಂದಾಗಿ ಹಣವನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಹಕಾರ ಸಂಘದ ಅಧ್ಯಕ್ಷ ಎಚ್‌.ಕೆ.ಮಂಜುನಾಥ್ ಹೇಳಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವುದರಿಂದ ಖಾಸಗಿ ಮತ್ತು ಅನುದಾನ ರಹಿತ ಸಂಸ್ಥೆಗಳ ಆಡಳಿತ ಮಂಡಳಿಗೆ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ತಮ್ಮ ಶಿಕ್ಷಕರಿಗೆ ಮಾಸಿಕ ವೇತನಕ್ಕೆ ಹಣ ಹೊಂದಿಸಲು ಸಾಧ್ಯವಾಗಿಲ್ಲ. ಅಲ್ಲದೇ ಬೆಂಗಳೂರಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಬೇಸಿಗೆಯ ನಂತರ ಶಾಲೆಗಳನ್ನು ಪುನರಾರಂಭಿಸದ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಶಿಕ್ಷಕರಿಗೆ ವೇತನ ಪಾವತಿಸಲು ಆಗಿಲ್ಲ ಎಂದು ತಿಳಿಸಿದ್ದಾರೆ.

ಖಾಸಗಿ ಶಾಲೆಗಳ ಸಂಘ ಶಿಕ್ಷಕರಿಗೆ 3 ತಿಂಗಳ ವೇತನವನ್ನು ನೀಡಲು ರಾಜ್ಯ ಸರಕಾರಕ್ಕ ಮನವಿ ಮಾಡಿದೆ. ಆದರೆ ಸರಕಾರದ ಖಜಾನೆಯಲ್ಲಿ ಹಣದ ಕೊರತೆಯಿರುವ ಕಾರಣದಿಂದ ಸರಕಾರ ಯಾವುದೇ ಪ್ರತಿಕ್ರಿಯೆಯನ್ನು ಕೊಟ್ಟಿರಲಿಲ್ಲ. ಖಾಸಗಿ ಶಾಲೆಗಳಲ್ಲಿ ನಮ್ಮ ಸಹವರ್ತಿಗಳಿಗೆ 2 ದಿನಗಳ ಸಂಬಳವನ್ನು ದೇಣಿಗೆ ನೀಡುವಂತೆ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದರು. ನಾವು ಒಂದು ದಿನದ ವೇತನ ಪಾವತಿಸಲು ಒಪ್ಪಿದ್ದೇವೆ. ಈಗಾಗಲೇ ಕೊಡಗು ಮತ್ತು ಉತ್ತರ ಕರ್ನಾಟಕ ಪ್ರವಾಹ ಪರಿಹಾರ ನಿಧಿಗೆ 2019 ರ ಸೆಪ್ಟೆಂಬರ್‌ನ;ಲ್ಲಿ ದೇಣಿಗೆ ನೀಡಿದ್ದೇವೆ. ಅಲ್ಲದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಹ ಹಣ ದೇಣಿಗೆ ಕೋಟ್ಟಿದ್ದೇವೆ ಎಂದು ಮಂಜುನಾಥ್ ಹೇಳಿದ್ದಾರೆ.

Leave A Reply

Your email address will not be published.