Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೋರ್ಡ್‌ ಪರೀಕ್ಷೆ, ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: Public Exam 2023 : ಸಾಕಷ್ಟು ಗೊಂದಲ, ಸುಪ್ರೀಂ ಕೋರ್ಟ್‌ ವಿಚಾರಣೆಯ ನಡುವಲ್ಲೇ ಇಂದಿನಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು (Public Exam 2023) ಆರಂಭವಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಬೋರ್ಡ್‌ ಪರೀಕ್ಷೆ ನಡೆಯುತ್ತಿದ್ದು, ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಂದಿನಿಂದ ಪರೀಕ್ಷೆ ಆರಂಭಗೊಂಡಿದ್ದು, 5ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.30ರ ವರೆಗೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದೇ ಮೊದಲ ಬಾರಿಗೆ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಯನ್ನು ಆಯೋಜಿಸಿದ್ದು, ರಾಜ್ಯದಲ್ಲಿ 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ. ಖಾಸಗಿ ಶಾಲೆಗಳ ಒಕ್ಕೂಟ ಹೈಕೋರ್ಟ್‌ ಮೆಟ್ಟಿಲೇರಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಆಯಾಯ ಶಾಲೆಗಳಲ್ಲಿಯೇ ಪರೀಕ್ಷೆ ನಡೆಯಲಿದೆ. ಇ

ಬೋರ್ಡ್‌ ಪರೀಕ್ಷೆಯಲ್ಲಿ ಪ್ರತಿ ವಿಷಯದ ಮೌಲ್ಯಂಕನಕ್ಕೆ ಎರಡು ಗಂಟೆಗಳ ಅವಧಿಯನ್ನು ನೀಡಲಾಗಿದೆ. ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ 1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು ಪ್ರತ್ಯಕ ಪ್ರಶ್ನೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. 10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ. 40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸುವಂತೆ ಸೂಚನೆ ನೀಡಲಾಗಿದೆ.

ಹೈಕೋರ್ಟ್‌ ಬೋರ್ಡ್‌ ಪರೀಕ್ಷೆಗೆ ಗ್ರೀನ್‌ ಸಿಗ್ನಲ್‌ ನೀಡುತ್ತಿದ್ದಂತೆಯೇ ಬೋರ್ಡ್‌ ಪರೀಕ್ಷೆ ರದ್ದುಕೋರಿದ ಅರ್ಜಿ ಇದೀಗ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆರಂಭದಲ್ಲಿಯೇ ಸುಪ್ರೀಂ ಕೋರ್ಟ್‌ ಪರೀಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಬೆನ್ನಲ್ಲೇ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿತ್ತು. ಆದ್ರೆ ಇಂದು ಸುಪ್ರೀಂ ಕೋರ್ಟ್‌ ಬೋರ್ಡ್‌ ಪರೀಕ್ಷೆಯ ವಿಚಾರವಾಗಿ ವಿಚಾರಣೆಯನ್ನು ನಡೆಸಲಿದೆ.

ಇದನ್ನೂ ಓದಿ : NP based syllabus: 3 ರಿಂದ 6ನೇ ತರಗತಿಯ ಎನ್‌ ಪಿ ಆಧಾರಿತ ಪಠ್ಯಕ್ರಮ ಬಿಡುಗಡೆ

ಇದನ್ನೂ ಓದಿ : KSP Recruitment 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

Comments are closed.