ಬೆಂಗಳೂರು: (PUC Anual exam timetable) 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳ ಅನ್ವಯ ಪರೀಕ್ಷೆಗಳನ್ನು ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆಯನ್ನು ಹೊರಡಿಸಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ (PUC Anual exam timetable) ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲೆಯ ಉಪನಿರ್ದೇಶಕರ ನೇತ್ರತ್ವದಲ್ಲಿ ಸಿದ್ದಪಡಿಸಿ ದಿನಾಂಕ 10-02-2023 ರಿಂದ 25-02-2023 ರವರೆಗೆ ಪರೀಕ್ಷೆಯನ್ನು ನಡೆಸಲು ತಿಳಿಸಲಾಗಿದೆ. ಹಾಗೇ ಪ್ರಥಮ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಯನ್ನು ತಾತ್ವಿಕ ಪರೀಕ್ಷೆಗೂ ಮೊದಲು ಕಾಲೇಜು ಹಂತದಲ್ಲಿ ನಡೆಸಲು ಸೂಚನೆ ನೀಡಲಾಗಿದೆ.
2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ದಿನಾಂಕ 06-02-2023 ರಿಂದ 28-02-2023 ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ದ್ವಿತಿಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಗಳನ್ನು ದಿನಾಂಕ 23-01-2023 ರಿಂದ 04-02-2023 ರವರೆಗೆ ನಡೆಸಲಾಗುವುದು. ಇದಕ್ಕೆ ಜಿಲ್ಲಾ ಉಪನಿರ್ದೇಶಕರ ನೇತ್ರತ್ವದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ ಪರೀಕ್ಷೆ ನಡೆಸಲಾಗುವುದು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ಪರೀಕ್ಷೆಗಳನ್ನು ನಡೆಸಲು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವಿಷಯವಾರು ವೇಳಾಪಟ್ಟಿಯನ್ನು ಆಯಾ ಜಿಲ್ಲಾ ಮಟ್ಟದಲ್ಲಿ ಅಥವಾ ಕಾಲೇಜುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಮಾರ್ಚ್ 2023 ಈ ಕೆಳಗಿನಂತಿವೆ;
09/03/2023 – ಗುರುವಾರ – ಕನ್ನಡ, ಅರೇಬಿಕ್
11/03/2023 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13/03/2023 – ಸೋಮವಾರ – ಅರ್ಥಶಾಸ್ತ್ರ
14/03/2023 – ಮಂಗಳವಾರ – ಕರ್ನಾಟಕ ಸಂಗೀತ, ಹಿಂಧೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ
15/03/2023 – ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16/03/2023 – ಗುರುವಾರೆ- ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
17/03/2023 – ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
18/03/2023 – ಶನಿವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ
20/03/2023 – ಸೋಮವಾರ – ಇತಿಹಾಸ, ಭೌತಶಾಸ್ತ್ರ
21/03/2023 – ಮಂಗಳವಾರ – ಹಿಂದಿ
23/03/2023 – ಗುರುವಾರ – ಇಂಗ್ಲಿಷ್
25/03/2023 – ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27/03/2023 – ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
29/03/2023 – ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಹಣಕ ವಿಜ್ಞಾನ
ಇದನ್ನೂ ಓದಿ : ಕಾರ್ಮೆಲ್ ಕಾನ್ವೆಂಟ್ ನ ಬಾಲಕಿಯರ ವಾಲಿಬಾಲ್ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ
ಈ ಎಲ್ಲಾ ಪರೀಕ್ಷೆಗಳು ನಿಗದಿತ ದಿನಾಂಕದಂದು ಬೆಳಿಗ್ಗೆ 10:15 ರಿಂದ 1:30 ರವರೆಗೆ ನಡೆಯುತ್ತವೆ.
PUC Annual exam timetable 2022-23 has issued a circular to the college management board to conduct examinations according to the timetables for the first PUC annual examination, practical examination and second PUC practical examination, pre-preparatory examination and annual examination and has published the examination schedule.