ದ್ವಿತೀಯ ಪಿಯುಸಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಲೀಕ್ ! ಪಿಯುಸಿ ವಿದ್ಯಾರ್ಥಿಗಳಿಗೆ ಶುರುವಾಗಿದೆ ಆತಂಕ

0

ವಿಜಯಪುರ : ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಇಂದಿನಿಂದ ಆರಂಭವಾಗಿದೆ. ಮೊದಲ ದಿನ ಪಿಯುಸಿ ಸೈನ್ಸ್ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ಆದರೆ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ.
ವಿದ್ಯಾರ್ಥಿಗಳು ಪರೀಕ್ಷೆ ಬರೋದಕ್ಕೆ ಆರಂಭಿಸಿ ಒಂದು ಘಂಟೆಯೊಳಗೆ ವಿಜಯಪುರದ ಇಂಡಿ ತಾಲೂಕಿನಲ್ಲಿ ಅನೇಕರ ಮೊಬೈಲ್ ಗಳಲ್ಲಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹರಿದಾಡಿದೆ.

ಇಂಡಿ ಪಟ್ಟಣದ ಶಾಂತೇಶ್ವರ ಪಿಯುಸಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಪರೀಕ್ಷೆಯ ಮೊದಲ ದಿನವೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡುತ್ತಿರೋದ್ರಿಂದಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಎಸ್ಎಸ್ಎಲ್ ಪೂರ್ವ ಸಿದ್ದತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ಮಾತ್ರವಲ್ಲ ಸಾಮಾಜಿಕ ಜಾಲತಾಣದಲ್ಲಿಯೂ ಕಿಡಿಗೇಡಿಗಳು ಹರಿಬಿಟ್ಟಿದ್ದರು. ಇದೀಗ ದ್ವಿತೀಯಾ ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೂ ಲೀಕ್ ಆಗಿದೆ. ಆದರೆ ಪರೀಕ್ಷೆ ಆರಂಭವಾದ ನಂತರ ಮೊಬೈಲ್ ನಲ್ಲಿ ಪೋಟೋ ತೆಗೆದು ಹರಿಬಿಟ್ಟಿದ್ದಾರಾ. ಇಲ್ಲಾ ಪರೀಕ್ಷೆ ಆರಂಭಕ್ಕೂ ಮೊದಲೇ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆಯಾ ಅನ್ನೋ ಬಗ್ಗೆ ತನಿಖೆ ನಡೆಯಬೇಕಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಭದ್ರತೆ ಇದ್ದಾಗ್ಯೂ ಪ್ರಶ್ನೆ ಪತ್ರಿಕೆ ಲೀಕ್ ಆಗಿರೋದ್ರ ಹಿಂದೆ ಕಾಲೇಜಿನ ಸಿಬ್ಬಂಧಿಗಳ ಕೈವಾಡವಿರೋ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ವಿದ್ಯಾರ್ಥಿ ಪೋಷಕರು ಆಗ್ರಹಿಸುತ್ತಿದ್ದಾರೆ.

Leave A Reply

Your email address will not be published.