ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ರಾಜ್ಯ ಸರಕಾರ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ದತೆಗಳನ್ನು ಮಾಡಿಕೊಂಡಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 5.85 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಜೂನ್ 18ರಂದು ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5.85 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ರಾಜ್ಯದಾದ್ಯಂತ 1,016 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ 340, ತಾಲೂಕು ಕೇಂದ್ರಗಳಲ್ಲಿ 328 ಹಾಗೂ ಹೋಬಳಿ ಕೇಂದ್ರದಲ್ಲಿ 258 ಪರೀಕ್ಷಾ ಕೇಂದ್ರಗಳನ್ನು ಸಿದ್ದ ಮಾಡಿಕೊಳ್ಳಲಾಗಿದೆ.

ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯಗೊಳಿಸಲಾಗಿದೆ.