ಭಾನುವಾರ, ಏಪ್ರಿಲ್ 27, 2025
HomeeducationPUC Exams : ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ನಲ್ಲಿ ಉಚಿತ ಪ್ರಯಾಣ

PUC Exams : ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಬಸ್ ನಲ್ಲಿ ಉಚಿತ ಪ್ರಯಾಣ

- Advertisement -

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಬಳಿಕ ಪರೀಕ್ಷೆಗೆ ಸಜ್ಜಾಗುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ‌ನೀಡಿದೆ. ಇದೇ ತಿಂಗಳ 22 ರಿಂದ ಲಕ್ಷಾಂತರ ದ್ವಿತೀಯ ಪಿಯುಸಿ (PUC Exams) ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸ ಸ್ಥಾನದಿಂದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಪರೀಕ್ಷಾ ಕೇಂದ್ರದಿಂದ ಹಿಂತಿರುಗಲು ಉಚಿತ ಪ್ರಯಾಣದ ಅವಕಾಶವಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ಬೇರೆ ಬೇರೆ ಶಿಕ್ಷಣ ಕೇಂದ್ರಗಳಲ್ಲಿ ನಡಿತಾ ಇರೋದರಿಂದ ಸರ್ಕಾರ ಹಾಗೂ ಕೆಎಎಸ್ಆರ್ಟಿಸಿ ಈ ತೀರ್ಮಾನಕ್ಕೆ ಬಂದಿದೆ. ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿರೋದರಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮನವಿ ಮಾಡಿಕೊಂಡಿತ್ತು. ಮನವಿ ಸ್ವೀಕರಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈಗ ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ. ಈ ಬಗ್ಗೆ ನಿಗಮದ ಎಲ್ಲ ನಿರ್ವಾಹಕರುಗಳಿಗೆ ಪ್ರವೇಶ ಪತ್ರ ಪರಿಶೀಲಿಸಿ ಉಚಿತ ಪ್ರಮಾಣಕ್ಕೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ ‌

ಇದಲ್ಲದೇ ಬಸ್ ಗಳು ಸಂಚರಿಸುವ ಮಾರ್ಗದಲ್ಲಿ ದ್ವೀತಿಯ ಪಿಯುಸಿ ಮಕ್ಕಳು ಹತ್ತುವವರಿದ್ದರೇ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಬಳಿ ನಿಲುಗಡೆಗೆ ಅವಕಾಶ ಕಲ್ಪಿಸುವಂತೆಯೂ ಸಿಬ್ಬಂದಿಗಳಿಗೆ ಕೆ.ಎಸ್.ಆರ್.ಟಿಸಿ ಸೂಚಿಸಿದೆ. ಈ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳೆಯೂ ರಾಜ್ಯ ಸರ್ಕಾರ ಹಾಗೂ ಕೆ.ಎಸ್.ಆರ್.ಟಿಸಿ ಬಸ್ ಪ್ರಯಾಣಕ್ಕೆ ಉಚಿತ ಅವಕಾಶ ಕಲ್ಪಿಸಿತ್ತು. ಈಗ ದ್ವಿತೀಯ ಪಿಯುಸಿ ಪರೀಕ್ಷೆಗೂ ಇದೇ ಸೌಲಭ್ಯವನ್ನು ಕಲ್ಪಿಸಲಾಗಿದೆ. ರಾಜ್ಯದಲ್ಲಿ ಏಪ್ರಿಲ್ 22 ರಿಂದ ಮೇ 18 ರವೆಗೂ ದ್ವೀತಿಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಈ ಭಾರಿ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಲಿದ್ದಾರೆ.

ಇದನ್ನೂ ಓದಿ : JEE Advanced 2022 : ಜೆಇಇ ಅಡ್ವಾನ್ಸ್ಡ್​​ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ : ICSE ISC Semester 2 : ಐಸಿಎಸ್​ಇ , ಐಎಸ್​ಸಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

PUC Exams : Good News for Second PUC students, free travel by bus

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular