PUC RESULT 2021 : ದಕ್ಷಿಣ ಕನ್ನಡ ಪ್ರಥಮ, ಬೆಂಗಳೂರು ದ್ವಿತೀಯ

ಬೆಂಗಳೂರು : 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಉಳಿದಂತೆ ಬೆಂಗಳೂರು ಉತ್ತರ ಮೂರು ಹಾಗೂ ಉಡುಪಿ ನಾಲ್ಕನೇ ಸ್ಥಾನ ಪಡೆದುಕೊಂಡಿವೆ. ಈ ಬಾರಿ ಒಟ್ಟು 2,239 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದಿದ್ಎಂದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಘೋಷಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 445 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನಗಳಿಸಿದೆ. ಬೆಂಗಳೂರು ದಕ್ಷಿಣ 302 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಎರಡನೇ ಸ್ಥಾನ, ಬೆಂಗಳೂರು ಉತ್ತರ 261 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆದು ಮೂರನೇ ಸ್ಥಾನ, ಉಡುಪಿಯಲ್ಲಿ 149 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ನಾಲ್ಕನೇ ಸ್ಥಾನ ಹಾಗೂ ಹಾಸನ ಜಿಲ್ಲೆಯಲ್ಲಿ 104 ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಈ ಬಾರಿ ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಗಳು ರದ್ದಾಗಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ, ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿನ ಕೃಪಾಂಕ ಅಂಕಗಳನ್ನು ಪರಿಗಣನೆಗೆ ತೆಗೆದುಕೊಂಡಿದ್ದು, ಮಾರ್ಗಸೂಚಿ ತಂತ್ರದ ಆಧಾರದ ಮೇಲೆ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶವನ್ನು ಕಳುಹಿಸುವ ಕಾರ್ಯವನ್ನು ಶಿಕ್ಷಣ ಇಲಾಖೆ ಮಾಡಿದೆ.

ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಳಿಸಲಾಗಿದೆ. ಈ ಬಾರಿ ಒಟ್ಟು ದ್ವಿತೀಯ ಪಿಯುಸಿಯಲ್ಲಿನ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದು, ಈ ಪೈಕಿ 1,95,650 ಡಿಸ್ಟಿಂಕ್ಷನ್‌ ನಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸುರೇಶ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

Comments are closed.