PUC ಫಲಿತಾಂಶ : ಉಡುಪಿ, ದ.ಕ. ಫಸ್ಟ್ : ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲು ಗೈ

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿವೆ. ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದರೆ. ವಿಜಯಪುರ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ 90.71% ಫಲಿತಾಂಶ ದಾಖಲಾಗಿದ್ದು ಪ್ರಥಮ ಸ್ಥಾನವನ್ನು ಹಂಚಿಕೊಂಡಿವೆ. ಮೂರನೇ ಸ್ಥಾನದಲ್ಲಿರುವ ಕೊಡಗು ಜಿಲ್ಲೆಯಲ್ಲಿ 81.53% ಉತ್ತರ ಕನ್ನಡ ಜಿಲ್ಲೆಯಲ್ಲಿ 80;97 % ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 79.11 % ಫಲಿತಾಂಶ ದಾಖಲಿಸುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕೊನೆಯ ಸ್ಥಾನದಲ್ಲಿರುವ ವಿಜಯಪುರದಲ್ಲಿ 54.22% ಫಲಿತಾಂಶ ದಾಖಲಾಗಿದೆ.

ಇನ್ನು ವಿಜ್ಞಾನ ವಿಷಯದಲ್ಲಿ 1,64,794 (65.278 %), ಕಲಾ ವಿಭಾಗದಲ್ಲಿ 82,077 (41.27 %) ಹಾಗೂ ವಾಣಿಜ್ಯ ವಿಭಾಗದಲ್ಲಿ 1,76,426 (76.22 % ) ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 92 ಕಾಲೇಜುಗಳು ಶೇ.100ರಷ್ಟು ಫಲಿತಾಂಶವನ್ನು ದಾಖಲಿಸಿವೆ. ಈ ಪೈಕಿ 3 ಸರಕಾರಿ, 1 ಅನುದಾನಿತ ಹಾಗೂ 78 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ರಾಜ್ಯದಲ್ಲಿ 5 ಸರಕಾರಿ ಪದವಿ ಪೂರ್ವ ಕಾಲೇಜು, 1 ಅನುದಾನಿತ ಪದವಿ ಪೂರ್ವ ಕಾಲೇಜು ಹಾಗೂ 78 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶವನ್ನು ದಾಖಲಿಸಿವೆ.

Leave A Reply

Your email address will not be published.