PUC Result 2021 : ಗ್ರೇಡಿಂಗ್ ಗೆ ಬ್ರೇಕ್, ಹಳೆ ಪದ್ದತಿಯಂತೆಯೇ ಫಲಿತಾಂಶ : ಆದೇಶ ಬದಲಾಯಿಸಿದ ಶಿಕ್ಷಣ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿ ಪೂರ್ಣ ಪರೀಕ್ಷಾ ಮಂಡಳಿ ಸಿದ್ದತೆ ನಡೆಸಿದ್ದು ಗ್ರೇಡ್ ಬದಲು ಹಳೆಯ ಪದ್ದತಿಯಂತೆ ಫಲಿತಾಂಶ ಪ್ರಕಟಿಸಲು ಮುಂದಾಗಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಿ, ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ಮುಂದಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿ ಗಳಿಗೆ ಅಂಕಗಳ ಬದಲು ಗ್ರೇಡಿಂಗ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಈ ಪದ್ದತಿಯ ಕುರಿತು ವಿರೋಧ ವ್ಯಕ್ತವಾಗಿತ್ತು.

ಇದೀಗ ಪದವಿ ಪೂರ್ವ ಪರೀಕ್ಷಾ ಮಂಡಳಿ ಹಳೆಯ ಪದ್ದತಿಯಂತೆ ಫಲಿತಾಂಶ ಪ್ರಕಟಿಸಲು ಮುಂದಾಗಿದೆ. ಹೀಗಾಗಿ ಗ್ರೇಡಿಂಗ್ ಬದಲು ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಗ್ರೇಡಿಂಗ್ ನೀಡಿದ್ರೆ ಸಾಮಾನ್ಯ ಪ್ರವೇಶ ಪರೀಕ್ಷೆ ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಇದನ್ನು ಮನಗಂಡು ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗುತ್ತಿದೆ.

Comments are closed.