PUC Result : ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ

ಬೆಂಗಳೂರು : ಪದವಿ ಪೂರ್ವ ಪರೀಕ್ಷಾ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಯ ದಿನಾಂಕವನ್ನು ಪ್ರಕಟಿಸಿದೆ. ಜುಲೈ 20ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಆನ್‌ಲೈನ್‌ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಮಾನದಂಡ ಆಧಾರದ ಮೇಲೆ ಈ ಬಾರಿ ಫಲಿತಾಂಶ ಪ್ರಕಟಿಸುವುದಾಗಿ ಪಿಯು ಬೋರ್ಡ್‌ ಘೋಷಣೆ ಮಾಡಿತ್ತು. ಅದರಂತೆಯೇ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.45 ಅಂಕ, ಪ್ರಥಮ ಪಿಯುಸಿಯಲ್ಲಿ ಶೇ.45 ಅಂಕ ಹಾಗೂ ಇಂಟರ್ನಲ್ ಅಸೆಸ್ಮೆಂಟ್ ನಿಂದ ಶೇ.10 ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟವಾಗಲಿದೆ. ಅದರಂತೆಯೇ ಈಗಾಗಲೇ ವಿದ್ಯಾರ್ಥಿಗಳ ಅಂಕವನ್ನು ವೆಬ್‌ಸೈಟ್‌ ನಲ್ಲಿ ಪ್ರಕಟಿಸಿ, ದೋಷ ಸರಿಪಡಿಸಲು ಕಾಲಾವಕಾಶ ವನ್ನು ನೀಡಿತ್ತು.

ಒಂದು ವೇಳೆ ಪಿಯು ಬೋರ್ಡ್‌ ಮಾನದಂಡಗಳ ಆಧಾರದ ಫಲಿತಾಂಶದಲ್ಲಿ ತೃಪ್ತರಾಗದ ವಿದ್ಯಾರ್ಥಿಗಳು ಬಯಸಿದರೆ ಪರೀಕ್ಷೆಯನ್ನು ನಡೆಸಲು ಕೂಡ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ಜುಲೈ 20 ರಂದು ಇಲಾಖೆ ಯ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಗ್ರೇಡ್‌ ಬದಲು ಅಂಕಗಳ ಆಧಾರದ ಮೇಲೆಯೇ ಫಲಿತಾಂಶವನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು Know my registration number ಲಿಂಕ್‌ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ.

Comments are closed.