ಬೆಂಗಳೂರು : ಲಾಕ್ ಡೌನ್ ನಡುವಲ್ಲೇ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟವಾಗಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಫಲಿತಾಂಶವನ್ನು ನೋಡಲು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸುವುದಕ್ಕೆ ನಿಷೇಧ ಹೇರಲಾಗಿದ್ದು, ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆಯನ್ನು ಮಾಡಲಾಗಿದೆ.

ಸಾಕಷ್ಟು ಗೊಂದಲಗಳ ನಡುವಲ್ಲೇ ಪ್ರಥಮ ಪಿಯುಸಿ ಫಲಿತಾಂಶ ನೀಡುವ ನಿಟ್ಟಿನಲ್ಲಿ ಪದವಿಪೂರ್ಣ ಶಿಕ್ಷಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ. ಕಾಲೇಜುಗಳ ಸೂಚನಾ ಫಲಕಗಳಲ್ಲಿ ಫಲಿತಾಂಶ ಪ್ರಕಟಿಸುವುದಿಲ್ಲಾ ಎಂದು ಸ್ಪಷ್ಟ ಪಡಿಸಿದೆ.

ವಿದ್ಯಾರ್ಥಿಗಳ ಮೊಬೈಲ್ ಗೆ ಈಮೇಲ್ ಮೂಲಕ ಫಲಿತಾಂಶವನ್ನು ತಲುಪಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಅನುತೀರ್ಣರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು ಮಟ್ಟದಲ್ಲಿಯೇ ನಡೆಸಲು ಮಾನದಂಡಗಳನ್ನು ತಿಳಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.