
ಬೆಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಪ್ರಕಟಿಸಿದೆ.

ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಫಲಿತಾಂಶದ ನಂತರದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಇಲಾಖೆ ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶವನ್ನು ಪ್ರಕಟಿಸಿದೆ.

ಫಲಿತಾಂಶ ಪ್ರಕಟವಾಗಿರುವ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನದ ಫಲಿತಾಂಶವನ್ನು ಇಲಾಖಾ ವೆಬ್ ಸೈಟ್ www.pue.kar.nic.in ನಿಂದ ಪಡೆಯಬಹುದಾಗಿದೆ.