PUC : ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಆನ್ ಲೈನ್ ನಲ್ಲಿ ಪರೀಕ್ಷೆಗೆ ಮುಂದಾದ ಇಲಾಖೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದ್ರೀಗ ಶಿಕ್ಷಣ ಇಲಾಖೆ ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲು ಮುಂದಾಗುವ ಮೂಲಕ ವಿದ್ಯಾರ್ಥಿಗಳಿಗೆ ಭರ್ಜರಿ ಶಾಕ್ ಕೊಟ್ಟಿದೆ.

ರಾಜ್ಯದ ಶಿಕ್ಷಣ ಇಲಾಖೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್ ಮಾಡುವುದಾಗಿ ಘೋಷಣೆ ಮಾಡಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಕಾಲೇಜುಗಳು ದ್ವಿತೀಯ ಪಿಯುಸಿ ತರಗತಿಗಳಿಗೆ ಸಿದ್ದತೆ ನಡೆಸುತ್ತಿದ್ದರು. ಆದ್ರೆ ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆ ಏಕಾಏಕಿಯಾಗಿ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲು ಆನ್ ಲೈನ್ ಪರೀಕ್ಷೆ ನಡೆಸಲು ಮುಂದಾಗಿದೆ.

ಪದವಿ ಪೂರ್ವ ಇಲಾಖೆ ಈಗಾಗಲೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಎರಡು ಪ್ರಶ್ನೆ ಪತ್ರಿಕೆಗಳನ್ನು ಸಿದ್ದ ಪಡಿಸಿ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಂಡು ಮನೆಯಲ್ಲಿಯೇ ಪರೀಕ್ಷೆ ಬರೆದು, ಉತ್ತರ ಪತ್ರಿಕೆಯನ್ನು ವಾಟ್ಸ್ ಆಫ್, ಈ ಮೇಲ್, ಅಂಚೆ ಮೂಲಕ ಕಾಲೇಜುಗಳಿಗೆ ಕಳುಹಿಸಬೇಕು. ಉಪನ್ಯಾಸಕರು ಮೌಲ್ಯ ಮಾಪನ ಮಾಡಿ ಸ್ಟೂಡೆಂಟ್ ಅಚೀವ್ ಮೆಂಟ್ ಟ್ರಾಕಿಂಗ್ ಸಿಸ್ಟಮ್ ನಲ್ಲಿ ಅಪ್ಲೋಡ್ ಮಾಡುವಂತೆ ಸೂಚಿಸಲಾಗಿದೆ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕ್ಷಣಕ್ಕೊಂದು ನಿಯಮ ಜಾರಿಗೆ ತರುವ ಮೂಲಕ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಇದೀಗ ಸರಕಾರ ಹೊಸ ನಿಯಮ ವಿದ್ಯಾರ್ಥಿಗಳಿಗೆ ಶಾಕ್ ಕೊಟ್ಟಿದೆ.

Comments are closed.