ಬೆಂಗಳೂರು : ಪ್ರಥಮ ಪಿಯುಸಿ ತರಗತಿಗಳಲ್ಲಿ ಅನುತೀರ್ಣರಾದವರಿಗೆ ಪೂರಕ ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆಗಳನ್ನು ನೀಡಿದೆ. ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳುವಂತೆ ಕಾಲೇಜುಗಳಿಗೆ ಹೇಳಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಾಲೇಜುಗಳ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ದೂರವಾಣಿ ಕರೆ ಮಾಡಿ, ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ದರಾಗುವಂತೆ ಮಾಡಬೇಕು. ಅನುತೀರ್ಣರಾದ ವಿದ್ಯಾರ್ಥಿಗಳಿಗೆ ಕಾಲೇಜು ಹಂತದಲ್ಲಿಯೇ ಪರೀಕ್ಷೆಗಳನ್ನು ಆಯೋಜಿಸಲಾಗುತ್ತದೆ.

ಶುಲ್ಕ ಪಾವತಿ ಹಾಗೂ ಪರೀಕ್ಷಾ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆದರೆ ಅದಕ್ಕೂ ಮೊದಲು ಪರೀಕ್ಷೆ ನಡೆಸಲು ಕಾಲೇಜುಗಳು ಸಿದ್ದರಾಗಬೇಕು.

ಸ್ಥಳೀಯ ಸನ್ನಿವೇಶಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಲು ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಳ್ಳಬೇಕು. ಅಲ್ಲದೇ ಸೀಮಿತ ಅವಧಿಯ ಒಳಗಾಗಿ ಪರೀಕ್ಷೆಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಕಾಲೇಜಿನ ಪ್ರಾಂಶುಪಾಲರು ಕ್ರಮವಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸೂಚನೆಯನ್ನು ನೀಡಿದೆ.