ಬುಧವಾರ, ಜೂನ್ 18, 2025
Homeeducationದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

- Advertisement -

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಾದ್ಯಂತ ಸೆಪ್ಟೆಂಬರ್ 7ರಿಂದ 18ರ ವರೆಗೆ ಪರೀಕ್ಷೆ ನಡೆಯಲಿದೆ.

Cet Exams 1

ಪದವಿ ಪೂರ್ವ ಪರೀಕ್ಷಾ ಮಂಡಳಿ ಇಂದು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎರಡು ಅವಧಿಯಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.15ರಿಂದ 5.30ರ ವರೆಗೆ ಪರೀಕ್ಷೆ ನಡೆಯಲಿವೆ.

Alvas1

ಸೆಪ್ಟೆಂಬರ್ 7 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಉರ್ದು, ಸಂಸ್ಕೃತ, ಮಧ್ಯಾಹ್ನ 2.15ರಿಂದ 5.30ರ ವರೆಗೆ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‍ನೆಸ್, ಹೋಮ್ ಸೈನ್, ಸೆ.8ರಂದು ಬೆಳಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ, ಸೆ.9ರಂದು ಬೆಳಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಳಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.

Exam Hall 1 E1592567506766

ಸೆ.10 ರಂದು ಬೆಳಗ್ಗೆ ಇಂಗ್ಲಿಷ್, ಸೆ.11ರಂದು ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭೂಗರ್ಭಶಾಸ್ತ್ರ, ಸೆ.12ರಂದು ಬೆಳಗ್ಗೆ ಅರ್ಥಶಾಸ್ತ್ರ, ಭೌತಶಾಸ್ತ್ರ, ಸೆ.14ರಂದು ಬೆಳಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಸೆ.15ರಂದು ಬೆಳಗ್ಗೆ ಕನ್ನಡ, ಸೆ.16ರಂದು ಬೆಳಗ್ಗೆ ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಸೆ.17ರಂದು ಬೆಳಗ್ಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ, ಸೆ.18ರಂದು ಬೆಳಗ್ಗೆ ಭೂಗೋಳಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular