ಸೋಮವಾರ, ಏಪ್ರಿಲ್ 28, 2025
Homeeducationಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

- Advertisement -

ಬೆಂಗಳೂರು : ಪಠ್ಯಪುಸ್ತಕ ವಿವಾದ ತಾರಕ್ಕೇರಿರುವಾಗಲೇ ರಾಜ್ಯ ಸರ್ಕಾರ ಹೊಸತೊಂದು ಸರ್ಕಸ್ ಗೆ ಸಿದ್ಧವಾಗಿದ್ದು, ದೇಶದ ಇತರ ರಾಜ್ಯಗಳನ್ನು ಮಾದರಿಯಾಗಿಟ್ಟುಕೊಂಡು ರಾಜ್ಯ ಶಿಕ್ಷಣ ಇಲಾಖೆಗೆ ಮರುನಾಮಕರಣಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಸರನ್ನು ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (department of school education and literacy) ಎಂದು ಮರುನಾಮಕರಣ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನೂ ಹೊರಡಿಸಿದೆ.

ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಎಂದು ಕರೆಯಲಾಗುತ್ತಿತ್ತು. ಬ್ರಿಟಿಷರ ಕಾಲದಿಂದಲೂ ಇದೇ ಹೆಸರನ್ನು ಬಳಸಿಕೊಂಡು ಬರಲಾಗುತ್ತಿದೆ. ಆದರೆ ಈಗ ಸರ್ಕಾರ ಶಿಕ್ಷಣ ಇಲಾಖೆಗೆ ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ. ದೇಶದ ಹಲವು ರಾಜ್ಯದಲ್ಲಿ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಎಂದೇ ಕರೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ಈಗ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ.

ಈ ಆದೇಶ ಪತ್ರದಲ್ಲಿ ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12 ನೇ ತರಗತಿಯವರೆಗಿನ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ -2020 ರಲ್ಲಿಯೂ ಸಹ ಸದರಿ ಅಂಶವನ್ನು ಪುನರುಚ್ಛಿರಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯನ್ನೊಳಗೊಂಡಂತೆ ಪದನಾಮವನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಬದಲಾಯಿಸುವುದು ಸೂಕ್ತ ಎಂದು ವಿವಿಧ ಹಂತದ ಚರ್ಚೆಯಲ್ಲಿ ತಜ್ಞರು ಅಭಿಪ್ರಾಯಿಸಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಹಾಗೂ ಹೆಚ್ಚಿನ ರಾಜ್ಯಗಳಲ್ಲಿ ಶಾಲಾ ಶಿಕ್ಷಣ ಇಲಾಖೆ ಎಂಬ ಪದನಾಮ ರೂಢಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿಯೂಸಹ ಇದೇ ಮಾದರಿಯನ್ನು ಅವಳಡಿಸಲು ಮೇಲೆ ಓದಲಾದ ಟಿಪ್ಪಣಿಯಲ್ಲಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಸೂಚಿಸಿರುತ್ತಾರೆ ಎಂದು ಉಲ್ಲೇಖಿಸಲಾಗಿದೆ.

ಅಲ್ಲದೇ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪ್ರಸ್ತುತ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಎಂದು ಕರೆಯಲ್ಪಡುವ ಇಲಾಖೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸೂಚಿಸಲಾಗಿದೆ. ಈಗಾಗಲೇ ಪಠ್ಯಪುಸ್ತಕ ವಿವಾದ ಸರ್ಕಾರದ ತಲೆ ಮೇಲೆ ತೂಗು ಕತ್ತಿ ಯಂತೇ ತೂಗುತ್ತಿರುವಾಗಲೇ ಸರ್ಕಾರ ಇಂತಹದೊಂದು ಹೊಸ ಆದೇಶ ಹೊರಡಿಸಿದ್ದು, ಇದು ಇನ್ನೆಷ್ಟು ವಿವಾದ ಸೃಷ್ಟಿಸುತ್ತೆ ಕಾದುನೋಡಬೇಕಿದೆ.

ಇದನ್ನೂ ಓದಿ : ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌ : ಕಾಮೆಡ್ ಕೆ ಪರೀಕ್ಷೆ ರದ್ದು, ಇನ್ಮುಂದೆ ಸಿಇಟಿ ಪರೀಕ್ಷೆ ಮಾತ್ರ

ಇದನ್ನೂ ಓದಿ : ಸಿಬಿಎಸ್‌ಇ 10, 12 ನೇ ತರಗತಿ ಫಲಿತಾಂಶ ದಿನಾಂಕ ಪ್ರಕಟ : ಫಲಿತಾಂಶ ನೋಡಲು cbresults.nic.in ಕ್ಲಿಕ್‌ ಮಾಡಿ

renamed department of primary and secondary education as the department of school education and literacy with immediate effect

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular