Education Minister Madhu Bangarappa : ಶಾಲೆಯ ಪಠ್ಯ ಪುಸ್ತಕ ಪರಿಷ್ಕರಣೆ : ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು ?

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಶೈಕ್ಷಣಿಕ ತರಗತಿಗಳು (Education Minister Madhu Bangarappa) ಶುರುವಾಗಲಿದೆ. ಇದೀಗ ಹಿಂದಿನ ಸರಕಾರ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಿರುವ ವಿಷಯಗಳನ್ನು ತೆಗೆದುಹಾಕುವಂತೆ ಸಾಹಿತಿಗಳು ರಾಜ್ಯ ಸರಕಾರಕ್ಕೆ ಮಾಡಿದ ಮನವಿಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ. ಅದರಂತೆ ಶಾಲೆಯ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆಯನ್ನು ನೀಡಿದ್ದಾರೆ.

ಕನ್ನಡದ ಸಾಮರಸ್ಯ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆಯಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ದ್ವೇಷದ ರಾಜಕಾರಣ ತ್ಯಾಗ ಮಾಡಿ ಭಯದ ವಾತಾವರಣ ನಿರ್ಮೂಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಹಿನ್ನೆಲೆಯಲ್ಲಿ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಹಂತ ಹಂತವಾಗಿ ಶಾಲಾ ಪಠ್ಯಪುಸ್ತಕವನ್ನು ಪರಿಷ್ಕರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಮೇ 30) ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಪಠ್ಯಕ್ರಮ ಪರಿಷ್ಕರಣೆ ಕುರಿತು ಈಗಾಗಲೇ ಪ್ರಣಾಳಿಕೆಯಲ್ಲಿ ಶಾಲಾ ಪಠ್ಯಕ್ರಮವನ್ನು ಹಂತ ಹಂತವಾಗಿ ಪರಿಷ್ಕರಿಸುತ್ತೇವೆ ಎಂದು ಹೇಳಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಕೊಳೆ ತುಂಬುವ ಪಠ್ಯ ಯಾವುದಾದರೂ ಇದ್ದರೆ ಅದನ್ನು ಬದಲಾಯಿಸುತ್ತೇವೆ. ನಾವು ಪರಿಷ್ಕರಣೆ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಮಾರ್ಗದರ್ಶನ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕೆಲ ಸಲಹೆಗಳನ್ನು ನೀಡಿದ್ದೇನೆ ಎಂದರು.

ಇದನ್ನೂ ಓದಿ : Karnataka education : ಕರ್ನಾಟಕದಲ್ಲಿ ನಾಳೆಯಿಂದ ಶಾಲೆಗಳು ಪುನರಾರಂಭ : ಮಕ್ಕಳ ಸ್ವಾಗತಕ್ಕೆ ಶಾಲೆಗಳು ಸಜ್ಜು

ಅದೇ ಸಮಯದಲ್ಲಿ, ಕಾಲೇಜುಗಳಲ್ಲಿ ಹಿಜಾಬ್ ಅನುಮತಿಯ ಬಗ್ಗೆ ಕಾಮೆಂಟ್ ಬಂದಿದೆ ಮತ್ತು ಹಿಜಾಬ್ ಬಗ್ಗೆ ಕೆಲವು ಕಾನೂನು ತೊಡಕುಗಳಿವೆ. ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇವೆ. ಮತ್ತು ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನೂನು ಹೋರಾಟ ನಡೆಸುತ್ತೇವೆ ಎಂದು ಹೇಳಿದರು. 2023-24ನೇ ಶೈಕ್ಷಣಿಕ ವರ್ಷಕ್ಕೆ ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲ. ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮಕ್ಕಳು ಯಾವುದೇ ಆತಂಕವಿಲ್ಲದೆ ನೆಮ್ಮದಿಯಿಂದ ಶಾಲೆಗೆ ಬನ್ನಿ ಎಂದು ಶಿಕ್ಷಣ ಸಚಿವರು ಕರೆ ನೀಡಿದರು.

Revision of school textbooks: What did the new Education Minister Madhu Bangarappa say?

Comments are closed.