ಬೆಂಗಳೂರು : Rohit chakratirtha : ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥರನ್ನು ರಾಜ್ಯ ಶಿಕ್ಷಣ ಇಲಾಖೆಯು ಕೈ ಬಿಟ್ಟಿದೆ. ಪಠ್ಯ ಪರಿಷ್ಕರಣೆ ಮಾಡುವ ಸಲುವಾಗಿ ರಾಜ್ಯ ಸರ್ಕಾರವು ರೋಹಿತ್ ಚಕ್ರತೀರ್ಥರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಆದರೆ ರೋಹಿತ್ ಚಕ್ರತೀರ್ಥ ಪಠ್ಯ ಪರಿಷ್ಕರಣಾ ಸಮಿತಿಗೆ ನೇಮಕವಾಗುತ್ತಿದ್ದಂತೆಯೇ ವಿರೋಧಗಳ ಸುರಿಮಳೆಯೇ ಎದುರಾಗಿತ್ತು. ಇವೆಲ್ಲವನ್ನು ಗಮನಿಸಿದ ರಾಜ್ಯ ಸರ್ಕಾರವು ಇದೀಗ ರೋಹಿತ್ ಚಕ್ರತೀರ್ಥರಿಗೆ ಪಿಯು ಪಠ್ಯ ಪರಿಷ್ಕರಣಾ ಸಮಿತಿಯಿಂದ ಗೇಟ್ಪಾಸ್ ನೀಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.
ರೋಹಿತ್ ಚಕ್ರತೀರ್ಥ ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣೆ ಮಾಡುವಷ್ಟು ದೊಡ್ಡ ಮೇಧಾವಿಯಲ್ಲ. ಅಂತರ್ಜಾಲದಲ್ಲಿ ಹುಡುಕಿದರೆ ಇವರ ಬಗ್ಗೆ ಒಂದು ಒಳ್ಳೆಯ ವಿಚಾರ ಸಿಗೋದಿಲ್ಲ. ಇವರ ಬೋಧನೆಗಳಿಗೆ ಯುಟ್ಯೂಬ್ನಲ್ಲಿ 20 ವೀವ್ಸ್ ಬರೋದಿಲ್ಲ. ಇಂಥವರನ್ನು 1 ಕೋಟಿ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಪಠ್ಯ ಪರಿಷ್ಕರಣಾ ಸಮಿತಿಗೆ ಸೇರಿಸುತ್ತೀರಾ ಎಂದು ಕಾಂಗ್ರೆಸ್ ಆಕ್ರೋಶ ಹೊರ ಹಾಕಿತ್ತು.
ಈ ಎಲ್ಲಾ ವಿರೋಧಗಳನ್ನು ಗಮನಿಸಿರುವ ರಾಜ್ಯ ಸರ್ಕಾರವು ಇದೀಗ ರೋಹಿತ್ ಚಕ್ರತೀರ್ಥರನ್ನು ಕೈ ಬಿಡಲು ನಿರ್ಧರಿಸಿದೆ. ದ್ವಿತೀಯ ಪಿಯುಸಿಯಲ್ಲಿ ಹೊಸ ಧರ್ಮಗಳ ಹೊಸ ಪಠ್ಯವನ್ನು ಸರ್ಕಾರ ಪರಿಷ್ಕರಣೆ ಮಾಡಿತ್ತು. ಇದರ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥರೇ ವಹಿಸಿದ್ದರು. ಆದರೆ ಈ ಎಲ್ಲಾ ವಿವಾದಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರೋಹಿತ್ ಚಕ್ರವರ್ತಿ ನೇತೃತ್ವದ ಸಮಿತಿಯನ್ನು ಕೈ ಬಿಡಲು ಶಿಕ್ಷಣ ಸಚಿವ ಬಿ,ಸಿ ನಾಗೇಶ್ ಮುಂದಾಗಿದ್ದಾರೆ, ಅಲ್ಲದೇ ಸಮಿತಿಯನ್ನು ವಿಜರ್ಸನೆ ಮಾಡಿರುವ ಹಿನ್ನಲೆಯಲ್ಲಿ ಈ ಸಮಿತಿಯ ಯಾವುದೇ ವರದಿಯನ್ನು ಮಾನ್ಯ ಮಾಡುವುದಿಲ್ಲ ಎಂದು ಬಿ.ಸಿ ನಾಗೇಶ್ ಹೇಳಿದ್ದಾರೆ.
ಇದನ್ನು ಓದಿ : Nigeria church : ಚರ್ಚ್‌ನಲ್ಲಿ ಗುಂಡಿನ ಚಕಮಕಿ : 50 ಮಂದಿ ಸಾವು, ಹಲವರಿಗೆ
ಇದನ್ನೂ ಓದಿ : Saurav Ganguly : ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ರಾಜೀನಾಮೆ : ಸ್ಪಷ್ಟನೆ ಕೊಟ್ಟ ಶಾ
ಇದನ್ನೂ ಓದಿ : uttara pradesha shruti sharma : ಯುಪಿಎಸ್ಸಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಶ್ರುತಿ ಶರ್ಮಾ ಬಗ್ಗೆ ಇಲ್ಲಿದೆ ಮಾಹಿತಿ
ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Rohit chakratirtha now out of puc textbook revision committee says education minister bc nagesh