ಬೆಂಗಳೂರು: (RTE application) 2023-24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯಲಿ ಆರ್‌ಟಿಇ ದಾಖಲಾತಿಗೆ ಮಾರ್ಚ್ 20, 2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯ ಆರ್ ಟಿಇ ದಾಖಲಾತಿಗಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ, ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿಯ ಆರ್ ಟಿಇ ದಾಖಲಾತಿಗಾಗಿ ಅರ್ಜಿಗಳನ್ನು 20-03-2023 ರಿಂದ 20-04-2023 ರವರೆಗೆ ಸ್ವೀಕರಿಸಲಾಗುವುದು ಎಂದು ತಿಳಿಸಲಾಗಿದೆ.
ಉಚಿತ ಹಾಗೂ ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009 ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಪೋಷಕರು ತಮ್ಮ ವ್ಯಾಪ್ತಿಯ ಶಾಲೆಗಳ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ https://www.schooleducation.kar.nic.in ನಲ್ಲಿ ಖಚಿತಪಡಿಸಿಕೊಳ್ಳಬೇಕು. ಬಳಿಕ ಆನ್ ಲೈನ್ ಮೂಲಕವೇ ಆರ್ ಟಿಇ ಸೀಟಿಗೆ ಅರ್ಜಿ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : KEA conducts KCET exam: ಕೆ-ಸೆಟ್ ಪರೀಕ್ಷೆಗಳನ್ನ ವಿಶ್ವವಿದ್ಯಾಲಯಗಳು ಮಾಡುವ ನಿರ್ಧಾರವನ್ನು ಕೈಬಿಟ್ಟ ಸರಕಾರ
ಇದನ್ನೂ ಓದಿ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ನಿರ್ದೇಶಕರ ವಿರುದ್ದ ನ್ಯಾಯಾಂಗ ನಿಂದನೆ: ಜೈಲು ಶಿಕ್ಷೆಯ ಎಚ್ಚರಿಕೆ ನೀಡಿದ ಹೈಕೋರ್ಟ್
ಇದನ್ನೂ ಓದಿ : SSLC Preparatory Examination Fee: SSLC ಪೂರ್ವ ಸಿದ್ದತಾ ಪರೀಕ್ಷೆ ಶುಲ್ಕ 50 ರೂ.ಗೆ ಇಳಿಕೆ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್
RTE application: Important information for parents: Application start for RTE seat: Here is complete information